ರಾಷ್ಟ್ರೀಯ

ಕಾಶ್ಮೀರದ ಕುಲ್ಗಾಮ್’ನಲ್ಲಿ ಕಲ್ಲು ತೂರಾಟಗಾರರ ಮೇಲೆ ಸೇನೆಯಿಂದ ಗುಂಡಿನ ದಾಳಿ: ಬಾಲಕಿ ಸೇರಿ ಮೂವರ ಸಾವು

Pinterest LinkedIn Tumblr

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್’ನಲ್ಲಿ ಕಲ್ಲು ತೂರಾಟಗಾರರ ಮೇಲೆ ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ 16 ವರ್ಷದ ಬಾಲಕಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ದಕ್ಷಿಣ ಕಾಶ್ಮೀರದ ರೆಡ್ವಾಣಿ ಪ್ರದೇಶದಲ್ಲಿ ಭದ್ರತಾ ಪಡೆಗಳ ಕ್ಯಾಂಪ್’ಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ಸೇನೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.

ಮೃತರನ್ನು ಕುಲ್ಗಾಮ್’ನ ಹವೂರಾ ನಿವಾಸಿಗಳಾದ ಶಕೀರ್ ಅಹ್ಮದ್ (22), ಇರ್ಶಾದ್ ಮಜೀದ್ (20) ಮತ್ತು ಅಂದ್ಲೀಬ್ (16) ಎಂದು ಗುರ್ತಿಸಲಾಗಿದೆ.

ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರತಿಭಟನಾಕಾರರು ಗಾಯಕೊಂಡಿದ್ದು, ಇಬ್ಬರು ವ್ಯಕ್ತಿಗಳ ದೇಹಕ್ಕೆ ಗುಂಡುಗಳು ಹೊಕ್ಕಿವೆ ಎಂದು ವರದಿಗಳಿಂದ ತಿಳಿದುಬಂದಿದೆ.

ಘಟನೆ ಹಿನ್ನಲೆಯಲ್ಲಿ ಯಾವುದೇ ರೀತಿಯ ವದಂತಿಗಳು ಹಬ್ಬದಂತೆ ಮುಂಜಾಗ್ರತೆ ವಹಿಸಿರುವ ಅಧಿಕಾರಿಗಳು ಕುಲ್ಗಾಮ್ ಹಾಗೂ ಅನಂತ್ ನಾಗ್ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ.

Comments are closed.