ಜೈಪುರ: ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳಿಂದ ತೀವ್ರ ಸ್ಪರ್ಧೆ ಎದುರಿಸುತ್ತಿರುವ ಆಡಳಿತಾರೂಢ ಬಿಜೆಪಿ ಸರಕಾರವು ಪ್ರಧಾನಿ ಮೋದಿ ಅವರ ವರ್ಚಸ್ಸು ಬಳಸಿಕೊಂಡು ಪ್ರಚಾರಾಂದೋಲನಕ್ಕೆ ಸಿದ್ಧತೆ ನಡೆಸಿದೆ. ಮೋದಿ ಅವರು ಶನಿವಾರ ಜೈಪುರದಲ್ಲಿ ನಡೆಸುವ ಸಾರ್ವಜನಿಕ ಸಮಾವೇಶದೊಂದಿಗೆ ಇದಕ್ಕೆ ಚಾಲನೆ ದೊರೆಯಲಿದೆ. ಸಮಾವೇಶಕ್ಕೆ ಜನರನ್ನು ಕರೆತರಲು ಸರಕಾರ ಬರೋಬ್ಬರಿ 7 ಕೋಟಿ ರೂ. ವಿನಿಯೋಗಿಸುತ್ತಿದೆ ಎಂದು ಮೂಲಗಳು ಹೇಳಿವೆ.
ಕೇಂದ್ರ ಸರಕಾರದ 12 ಸಾಮಾಜಿಕ ಕಲ್ಯಾಣ ಯೋಜನೆಗಳ 2.5 ಲಕ್ಷ ಫಲಾನುಭವಿಗಳನ್ನು 33 ಜಿಲ್ಲೆಗಳಿಂದ 5500ಕ್ಕೂ ಹೆಚ್ಚಿನ ಬಸ್‌ಗಳ ಮೂಲಕ ಸಮಾವೇಶಕ್ಕೆ ಕರೆತರುವ ಗುರಿಯನ್ನು ಸರಕಾರ ಹಾಕಿಕೊಂಡಿದೆ. ಬಸ್ ಬಾಧಿಡಿಧಿಗೆಧಿಗೇ 7 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ಇದರಲ್ಲಿ ಬಹುತೇಕ ಮೊತ್ತವು ಯೋಜನೆಗಳಿಗೆ ನಿಗದಿಗೊಳಿಸಲಾಗಿರುವ ಅನುದಾನದಿಂದಲೇ ಬಳಕೆಯಾಗಿದೆ ಎಂದು ಮೂಲಗಳು ಹೇಳಿವೆ. ಇದು ಮುಂದಿನ ದಿನಗಳಲ್ಲಿ ಪ್ರತಿಪಕ್ಷಗಳಿಗೆ ಅಸ್ತ್ರವಾಗುವ ಸಾಧ್ಯತೆ ಇದೆ. ಈ ಮಧ್ಯೆ ಜೈಪುರದಲ್ಲಿ ಭದ್ರತೆಯನ್ನು ದುಪ್ಪಟ್ಟುಗೊಳಿಸಲಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
Comments are closed.