ಪಟನಾ: ಹೊಸದಿಲ್ಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಘಟನೆ ಬಿಹಾರದಲ್ಲಿ ಮಂಗಳವಾರ ನಡೆದಿದೆ.
ಬೆಗುಸರಾಯ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಕನ್ಹಯ್ಯ ಮತ್ತು ಅವರ ಸಂಗಡಿಗರು ಪ್ರಯಾಣಿಸುತ್ತಿದ್ದ ಕಾರು ದಹಿಯಾ ಗ್ರಾಮ ಪ್ರವೇಶಿಸಿದಾಗ ದಾಳಿ ನಡೆದಿದೆ. ವಾಹನದಲ್ಲಿದ್ದ ಕೆಲವರು ಗಾಯಗೊಂಡಿದ್ದಾರೆ.
ಪಟನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯ ಕಿರಿಯ ವೈದ್ಯರೊಂದಿಗೆ ಕೈಕೈ ಮಿಲಾಯಿಸಿದ ಕಾರಣ ಕನ್ಹಯ್ಯ ಮತ್ತು ಆತನ ಬೆಂಬಲಿಗರ ವಿರುದ್ಧ ಫುಲ್ವಾರಿ ಷರೀಫ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾದ ಕೆಲವೇ ದಿನಗಳಲ್ಲಿ ಈ ದಾಳಿ ನಡೆದಿದೆ.
31 ರ ಹರೆಯದ ಕನ್ಹಯ್ಯ ಅವರು ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬೆಗುಸರಾಯ್ ಕ್ಷೇತ್ರದಿಂದ ಸಿಪಿಎಂ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ನಿರೀಕ್ಷೆ ಇದೆ.
Comments are closed.