ಲಕ್ನೋ: ಪೊಲೀಸ್ ಅಧಿಕಾರಿಯನ್ನು ಬಿಜೆಪಿ ಪಾಲಿಕೆ ಸದಸ್ಯ ಹೋಟೆಲ್ವೊಂದರಲ್ಲಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೀರತ್ನಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.
ಹೋಟೆಲ್ನಲ್ಲಿ ಸಿಬ್ಬಂದಿಗಳ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಸುಕ್ಪಾಲ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಪಾಲಿಕೆ ಸದಸ್ಯ ಮನಿಶ್ ಶರ್ಮಾ ಪೊಲೀಸರನ್ನು ತಳ್ಳಿ, ಹಲ್ಲೆ ಮಾಡಲು ಮುಂದಾಗಿದ್ದಾರೆ.
ಸುಮೊಹದ್ದಿಪೂರ್ ಪೊಲೀಸ್ ಠಾಣೆಯ ಮುಖ್ಯಸ್ಥ ಸುಕ್ಪಾಲ್ ಎಂದು ತಿಳಿದು ಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಬಿಜೆಪಿ ಕೌನ್ಸಿಲರ್ ಸೇರಿದಂತೆ ಅವರ ಜೊತೆಇದ್ದವರನ್ನು ಬಂಧಿಸಲಾಗಿದ್ದು, ದೂರು ದಾಖಲಿಸಲಾಗಿದೆ. ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜೆಪಿ ನಾಯಕನ ಬಂಧನ ವಿಷಯ ತಿಳಿಯುತ್ತಿದ್ದಂತೆ ಪಕ್ಷದ ನಾಯಕರು ಪೊಲೀಸರ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ. ಅಲ್ಲದೇ ಪೊಲೀಸ್ ಅಧಿಕಾರಿಯೇ ಮಧ್ಯೆ ಸೇವಿಸಿ ಹೋಟೆಲ್ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಎರಡು ಕಡೆಗಳಿಂದ ಆರೋಪ ಎದುರಾಗಿದ್ದು, ಪ್ರಕರಣ ಕುರಿತು ತನಿಖೆಗೆ ಮುಂದಾಗಿದ್ದೇವೆ. ವಿಡಿಯೋ ಆಧಾರದ ಮೇಲೆ ತನಿಖೆ ನಡೆಸುತ್ತೇವೆ ಎಂದು ಮೀರತ್ ಎಸ್ಪಿ ರಂವಿಜಯ್ ಸಿಂಗ್ ತಿಳಿಸಿದ್ದಾರೆ.
Comments are closed.