ರಾಷ್ಟ್ರೀಯ

ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

Pinterest LinkedIn Tumblr


ಶ್ರೀನಗರ: ಜಮ್ಮು ಕಾಶ್ಮೀರದ ಬಿಜೆಪಿ ರಾಜ್ಯ ಕಾರ್ಯದರ್ಶಿ ಅನಿಲ್ ಪರಿಹಾರ್​ ಅವರನ್ನು ಇಂದು ಸಂಜೆ ಅಪರಿಚಿತ ವ್ಯಕ್ತಿ ಗುಂಡಿಕ್ಕಿ ಕೊಂದಿದ್ದಾನೆ.

ಕಿಷ್ಟವಾರ್​ ಎಂಬಲ್ಲಿ ಅನಿಲ್​ ಪರಿಹಾರ್​ ತಮ್ಮ ಸೋದರ ಅಜೀತ್​ ಕುಮಾರ್​ ಪರಿಹಾರ್​ ಅವರೊಂದಿಗೆ ಬೈಕ್​ನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ಅಪರಿಚಿತ ಗುಂಡಿನ ದಾಳಿ ನಡೆಸಿದ್ದಾನೆ. ಪರಿಹಾರ್​ ಅವರ ಮನೆಯ ಸಮೀಪದಲ್ಲೇ ಘಟನೆ ನಡೆದಿದೆ.

ದುರದೃಷ್ಟವಶಾತ್​ ಸೋದರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದು ಭಯೋತ್ಪಾದಕರ ಕೃತ್ಯವೋ ಅಥವಾ ವೈಯಕ್ತಿಕ ದ್ವೇಷದಿಂದ ನಡೆದ ಹತ್ಯೆಯೋ ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.

ಘಟನೆ ನಡೆದ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತನಿಖೆಯನ್ನು ಕೈಗೆತ್ತಿಕೊಂಡಿರುವ ಪೊಲೀಸರು ಶೀಘ್ರದಲ್ಲೇ ಅಪರಾಧಿಯನ್ನು ಪತ್ತೆಹಚ್ಚುವ ಭರವಸೆ ನೀಡಿದ್ದಾರೆ. ಸದ್ಯಕ್ಕೆ ಕಿಷ್ಟವಾರ್​ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Comments are closed.