ಭುವನೇಶ್ವರ್: ಮಹಿಳೆಯೊಬ್ಬಳು ಯುವಕನ ಮರ್ಮಾಂಗವನ್ನು ಕತ್ತರಿಸಿದ ಅಮಾನವೀಯ ಘಟನೆಯೊಂದು ಒಡಿಶಾದ ಕೆಯೊಂಜ್ಹಾರ ಜಿಲ್ಲೆಯ ಹರಿಚಂದನ್ ಪುರ್ ಪ್ರದೇಶದಲ್ಲಿ ನಡೆದಿದೆ.
ಈ ಘಟನೆ ಕಳೆದ ರಾತ್ರಿ ನಡೆದಿದ್ದು, ಯುವಕನನ್ನು ರಾಜೇಂದ್ರ ನಾಯಕ್ ಎಂದು ಗುರುತಿಸಲಾಗಿದೆ. ಈತ ಜರಬಿದಾ ಗ್ರಾಮದ ಘತಗಾನ್ ಪ್ರದೇಶದ ನಿವಾಸಿಯಾಗಿದ್ದಾನೆ.
ಏನಿದು ಘಟನೆ?:
ಯುವಕ ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದು, ಬುಧವಾರ ಸಂಜೆ ವಾಪಸ್ಸಾಗಿದ್ದಾನೆ. ಇನ್ನೇನೋ ಸ್ವಲ್ಪ ಹೊತ್ತಿನಲ್ಲೇ ರಾತ್ರಿಯಾಗುತ್ತೆ ಅಂತ ಯುವಕ, ಹರಿಚಂದನ್ ಪುರದಲ್ಲಿರೋ ಮಹಿಳೆಯ ಮನೆಯಲ್ಲಿ ತಂಗಿದ್ದಾನೆ. ಮರುದಿನ ಬೆಳಗ್ಗೆ ಆತ ತನ್ನ ಮನೆಗೆ ಅಲ್ಲಿಂದ ತೆರಳುವವನಿದ್ದನು.
ರಾತ್ರಿ ಮಹಿಳೆ ತನಗೆ ಒತ್ತಾಯಪೂರ್ವಕವಾಗಿ ಮದ್ಯಪಾನ ಮಾಡಿಸಿದ್ದಾಳೆ. ಅತಿಯಾಗಿ ಮದ್ಯ ಸೇವಿಸಿದ್ದರಿಂದ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದೆನು. ಇದನ್ನೇ ಸದುಪಯೋಗಪಡಿಸಿಕೊಂಡ ಮಹಿಳೆ ಮರ್ಮಾಂಗವನ್ನು ಕಟ್ ಮಾಡಿದ್ದಾಳೆ ಅಂತ ಯುವಕ ಆರೋಪಿಸಿದ್ದಾನೆ.
ನಾವಿಬ್ಬರು ಫೋನ್ ನಲ್ಲಿ ಮಾತನಾಡುತ್ತಿದ್ದೆವು. ಆದ್ರೆ ನಾನು ಬೇರೆಯವರ ಜೊತೆ ಮಾತನಾಡುತ್ತಿದ್ದಾಗ ಆಕೆ ಅದನ್ನು ಖಂಡಿಸಿದ್ದಳು. ಈ ವಿಚಾರಕ್ಕಾಗಿ ಇಬ್ಬರ ಮಧ್ಯೆ ಜಗಳ ನಡೆದಿದೆ. ನೀನು ನನ್ನ ಜೊತೆ ಮಾತ್ರ ಮಾತಾಡಬೇಕು, ನನ್ನ ಮನೆಗೆ ಬಂದು ಬೇರೆಯವರ ಜೊತೆ ಮಾತನಾಬೇಡ ಅಂತ ತಗಾದೆ ತೆಗೆದಿದ್ದಳು. ಇದೇ ವಿಚಾರದಿಂದ ಸಿಟ್ಟುಗೊಂಡ ಆಕೆ ಈ ಕೃತ್ಯ ಎಸಗಿದ್ದಾಳೆ ಅಂತ ಸಂತ್ರಸ್ತ ಯುವಕ ತಿಳಿಸಿದ್ದಾನೆ.
ಸದ್ಯ ಯುವಕ ಹರಿಚಂದನ್ ಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ ಅಂತ ವರದಿಯಾಗಿದೆ.
Comments are closed.