ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಅಯೋಧ್ಯೆ ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮತ್ತೆ ಸುಪ್ರೀಂ ಕೋರ್ಟ್ ಜನವರಿ 29ಕ್ಕೆ ಮುಂದೂಡಿದೆ.
ಇಂದು ವಿಚಾರಣೆ ಆರಂಭಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆಐ ರಂಜನ್ ಗಗೋಯ್ ಅವರು, ‘ಅಯೋಧ್ಯೆ ಪ್ರಕರಣದಲ್ಲಿ ಇಂದು ವಿಚಾರಣೆ ನಡೆಯುವುದಿಲ್ಲ. ವಿಚಾರಣೆಯ ಅರ್ಜಿಗಳನ್ನು ಮಾತ್ರ ನಾವು ಕೈಗೆತ್ತಿಕೊಳ್ಳುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಅಂತೆಯೇ ಸದ್ಯ, ಪ್ರಕರಣ ವಿಚಾರಣೆಯನ್ನು ಜನವರಿ 29ಕ್ಕೆ ಮುಂದೂಡಲ್ಪಟ್ಟಿದೆ.
ಈ ಹಿಂದೆ ಜ.4ರಂದು ಒಂದೇ ನಿಮಿಷದಲ್ಲಿ ಅರ್ಜಿ ವಿಚಾರಣೆ ನಡೆಸಿದ್ದ ರಂಜನ್ ಗೊಗೊಯ್ ನೇತೃತ್ವದ ಪೀಠ, ‘ಅಯೋಧ್ಯೆ ಪ್ರಕರಣದ ತನಿಖೆ ವಿಚಾರದಲ್ಲಿ ಮುಂದಿನ ಆದೇಶವನ್ನು ಜನವರಿ 10ರಂದು ನೀಡಲಾಗುವುದು’ ಎಂದಿತ್ತು.
ಅಲ್ಲದೆ, ಪ್ರಕರಣವನ್ನು ಹೊಸ ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡುವುದಾಗಿ ಮಂಗಳವಾರ ತಿಳಿಸಿತ್ತು. ಹೊಸ ಪೀಠದಲ್ಲಿ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಉದಯ್ ಲಲಿತ್, ಎಸ್.ಎ ಬೊಬ್ಡೆ, ಎಸ್.ವಿ. ರಮಣ್ ಇದ್ದಾರೆ. ರಂಜನ್ ಗೊಗೊಯಿ ಈ ಪೀಠದ ನೇತೃತ್ವ ವಹಿಸಿದ್ದರು.
Comments are closed.