ರಾಷ್ಟ್ರೀಯ

ಅಯೋಧ್ಯೆ ಭೂ ವಿವಾದ ಸಂಧಾನದ ಮೂಲಕವೇ ಬಗೆಹರಿಯಲಿ ! ‘ಸುಪ್ರೀಂ’ನಿಂದ ನಿವೃತ್ತ ನ್ಯಾ.ಖಲೀಫುಲ್ಲಾ, ರವಿಶಂಕರ್ ಗುರೂಜಿ ನೇತೃತ್ವದ ಸಂಧಾನ ಸಮಿತಿ ನೇಮಕ

Pinterest LinkedIn Tumblr

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಸಂಧಾನದ ಮೂಲಕವೇ ವಿವಾದ ಬಗೆಹರಿಯಲಿದೆ ಎಂದು ತೀರ್ಪು ನೀಡಿದೆ. ಅಲ್ಲದೆ ಸಂಧಾನಕ್ಕಾಗಿ ತಾನೇ ಸಂಧಾನ ಸಮಿತಿಯನ್ನೂ ಕೂಡ ರಚನೆ ಮಾಡಿದೆ.

ದಶಕಗಳ ಕಾಲ ಹಿಂದೂ ಮತ್ತು ಮುಸ್ಲಿಂ ಬಾಂಧವರ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದ ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಸಂಧಾನದ ಮೂಲಕವೇ ವಿವಾದ ಇತ್ಯರ್ಥವಾಗಲಿದೆ ಎಂದು ಹೇಳಿದ್ದು, ಸಂಧಾನಕ್ಕಾಗಿ ಮೂವರು ಸದಸ್ಯರ ಸಮಿತಿಯನ್ನೂ ನೇಮಕ ಮಾಡಿ ಆದೇಶ ಹೊರಡಿಸಿದೆ. ಅಂತೆಯೇ ವಾರಗಳೊಳಗೆ ಸಂಧಾನ ಕುರಿತ ವರದಿ ನೀಡುವಂತೆ ಸಂಧಾನ ಸಮಿತಿಗೆ ಸೂಚನೆ ನೀಡಿದೆ.

ಮಧ್ಯಸ್ಥಿಕೆ ಮೂಲಕ ವಿವಾದ ಬಗೆಹರಿಸಲು ಕಾನೂನಿನ ಯಾವುದೇ ತೊಡಕಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು, 8 ವಾರಗಳಲ್ಲಿ ಮಧ್ಯಸ್ಥಿಕೆ- ರಾಜಿ ಸಂಧಾನದ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಕೋರ್ಟ್ ಆದೇಶ ನೀಡಿದೆ.

ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ ನೇತೃತ್ವದ ಸಂಧಾನ ಸಮಿತಿ
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಇಬ್ರಾಹಿಂ ಖಲೀಫುಲ್ಲಾ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಇವರೊಂದಿಗೆ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಮುಖ್ಯಸ್ಥ ರವಿಶಂಕರ್ ಗುರೂಜಿ ಮತ್ತು ವಕೀಲ ಶ್ರೀರಾಮ್ ಪಂಚು ಅವರನ್ನು ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

Comments are closed.