ನವದೆಹಲಿ: ಜೈಷ್ – ಇ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಜೀ ಎಂದಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಹಾರ ನ್ಯಾಯಾಲಯವೊಂದರಲ್ಲಿ ಕೇಸ್ ದಾಖಲಾಗಿದೆ.
ದೇಶದ್ರೋಹ ಸೇರಿದಂತೆ ಮತ್ತಿತರ ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ಸಾಮಾಜಿಕ ಕಾರ್ಯಕರ್ತ ತಮನ್ನಾ ಹಸ್ಮಿ ಎಂಬುವರು ಮುಝಾಪರ್ ಪುರುವಿನ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕೇಸ್ ದಾಖಲಿಸಿದ್ದಾರೆ.
ಸೋಮವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಸ್ತುತ ರಾಷ್ಟ್ರೀಯ ರಕ್ಷಣಾ ಸಲಹೆಗಾರರಾಗಿರುವ ಅಜಿತ್ ಧೋವಲ್ ಅವರು ಮಸೂದ್ ಅಝರ್ ಜೀ ಅವರನ್ನು ವಿಮಾನದಲ್ಲಿ ಕರೆದುಕೊಂಡು ಹೋಗಿ ಕಂದಹಾರ್ ನಲ್ಲಿ ಬಿಟ್ಟು ಬಂದಿದ್ದರು ಎಂದು ಹೇಳಿಕೆ ನೀಡಿದ್ದರು.
ಮಸೂದ್ ಅಝರ್ ಜೀ ಎಂದು ಹೇಳುವ ಮೂಲಕ ರಾಹುಲ್ ಗಾಂಧಿ, ಇಡೀ ದೇಶದ ಜನರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಹಸ್ಮಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಮಾರ್ಚ್ 16ಕ್ಕೆ ನಿಗದಿಪಡಿಸಿದೆ.
Comments are closed.