ಫೈಜಾಬಾದ್: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ 25 ಕಕ್ಷಿದಾರರು ತಮ್ಮ ವಕೀಲರೊಂದಿಗೆ ಬುಧವಾರ ಸುಪ್ರೀಂ ಕೋರ್ಟ್ ನೇಮಿಸಿದ ಸಂಧಾನಕಾರರ ಸಮಿತಿಯನ್ನು ಭೇಟಿಯಾದರು ಎಂದು ಅಧಿಕಾರಿಗಳು ತಿಳಿಸಿದರು.
ಸಂಧಾನ ಸಮಿತಿಯ ಪರವಾಗಿ ಫೈಜಾಬಾದ್ ಆಡಳಿತ 25 ಕಕ್ಷಿದಾರರಿಗೆ ನೋಟೀಸ್ ಜಾರಿ ಮಾಡಿತ್ತು.
ಫೈಜಾಬಾದ್ ಅವಧ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಸಂಧಾನ ಪ್ರಕ್ರಿಯೆ ನಡೆಯಲಿದೆ. ಮಧ್ಯಸ್ಥಿಕೆ ಪ್ರಕ್ರಿಯೆ ನಡೆಯುವ ಸ್ಥಳಕ್ಕೆ ಹೊರಗಿನ ಯಾರಿಗೂ ಪ್ರವೇಶವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.
ವಿಶ್ವವಿದ್ಯಾಲಯದ ಆವರಣದಲ್ಲಿ ಭಾರೀ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ ಎಂದು ಫೈಜಾಬಾದ್ ಜಿಲ್ಲಾಧಿಕಾರಿ ಅನುಜ್ ಕುಮಾರ್ ಝಾ ತಿಳಿಸಿದರು.
ಸಂಧಾನ ಸಮಿತಿ ಸದಸ್ಯರಾದ ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ, ಹಿರಿಯ ವಕೀಲ ಶ್ರೀರಾಮ್ ಪಂಚು ಮತ್ತು ಅಧ್ಯಾತ್ಮ ಗುರು ಶ್ರೀ ಶ್ರೀ ರವಿಶಂಕರ್ ಮಂಗಳವಾರವೇ ಇಲ್ಲಿಗೆ ಆಗಮಿಸಿದ್ದರು ಎಂದು ಅವರು ಮಾಹಿತಿ ನೀಡಿದರು.
ಸಮಿತಿಯ ಅಧಿಕೃತ ಕಾರ್ಯಸೂಚಿಯಂತೆ ಮೂರು ದಿನಗಳ ಕಾಲ ಸಂಧಾನಕಾರರು ಫೈಜಾಬಾದ್‌ನಲ್ಲಿ ಉಳಿಯಲಿದ್ದಾರೆ.
Comments are closed.