ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮಾದಲ್ಲಿ ಆತ್ಮಾಹುತಿ ಉಗ್ರ ದಾಳಿಯಲ್ಲಿ 40ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು ಇದೀಗ ಇದೇ ರೀತಿಯ ಮತ್ತೊಂದು ಉಗ್ರ ದಾಳಿಗೆ ಭಯೋತ್ಪಾದಕರು ಯತ್ನ ನಡೆಸಿದ್ದಾರೆ.
ಜಮ್ಮು-ಶ್ರೀನಗರ ಹೆದ್ದಾರಿ ಬನಿಹಾಲ್ ನಲ್ಲಿ ಸಿಆರ್‌ಪಿಎಫ್ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದಿದ್ದು ನಂತರ ಸ್ಫೋಟ ಸಂಭವಿಸಿದೆ. ವಾಹನಕ್ಕೆ ಡಿಕ್ಕಿ ಹೊಡೆದ ಕೂಡಲೇ ಕಾರಿನ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ.
ಸ್ಫೋಟದ ತೀವ್ರತೆ ಕಡಿಮೆ ಇದ್ದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇನ್ನು ಕಾರು ಚಾಲಕನ ಬಂಧನಕ್ಕೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದೆ. ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
Comments are closed.