ರಾಷ್ಟ್ರೀಯ

ಯಾವ ಪಕ್ಷ ಎಷ್ಟು ಸೀಟು ಜಯಗಳಿಸಲಿವೆ?: ಇಂಡಿಯಾ ಟಿವಿ-ಸಿಎನ್‌ಎಕ್ಸ್‌’ ಚುನಾವಣಾ ಪೂರ್ವ ಸಮೀಕ್ಷೆ

Pinterest LinkedIn Tumblr

ನವದೆಹಲಿ: ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಕೇಂದ್ರದಲ್ಲಿ ಈ ಬಾರಿ ಯಾರು ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ ಎನ್ನುವ ಲೆಕ್ಕಾಚಾರಗಳು ಜೋರಾಗಿ ನಡೆಯುತ್ತಿವೆ. ಈ ಬೆನ್ನಲ್ಲೀಗ ‘ಇಂಡಿಯಾ ಟಿವಿ-ಸಿಎನ್‌ಎಕ್ಸ್‌’ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎಗೆ ಪ್ರಯಾಸದ ಬಹುಮತ ಸಿಗಲಿದೆ ಎಂದು ಹೇಳಿದೆ.

ಕಳೆದ ಬಾರಿಗಿಂತ ಈ ಸಲ ಎನ್​​ಡಿಎ ಕಡಿಮೆ ಸೀಟು ಗೆಲ್ಲಲಿದೆ. ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರ ಸ್ಥಾಪಿಸಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. ಈ ಬಾರಿ ಒಟ್ಟು 543 ಸ್ಥಾನಗಳ ಪೈಕಿ ಬಿಜೆಪಿ ನೇತೃತ್ವದ ಎನ್​​ಡಿಎಗೆ 275, ಕಾಂಗ್ರೆಸ್​​ ನೇತೃತ್ವದ ಯುಪಿಎಗೆ 147, ತೃತೀಯ ರಂಗದ ಪ್ರಾದೇಶಿಕ ಪಕ್ಷಗಳಿಗೆ 121 ಸೀಟುಗಳು ಲಭ್ಯವಾಗಲಿದೆ ಎನ್ನಲಾಗಿದೆ.

ಇನ್ನು ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಮಹಾಘಟಬಂಧನ್, ಎಸ್‍ಪಿ-ಬಿಎಸ್‍ಪಿ ಮೈತ್ರಿ ಲೆಕ್ಕಕ್ಕೆ ಇಲ್ಲ ಎನ್ನುವಂತೆ ಮಾತನಾಡುತ್ತಿರಬಹುದು. ಚುನಾವಣಾ ಪೂರ್ವ ಸಮೀಕ್ಷೆಗಳು ಮಾತ್ರ ಬೇರೆಯದನ್ನೇ ಹೇಳುತ್ತಿವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹಾದಿ ಸುಲಭವಲ್ಲ. ಇವತ್ತು ಕೆಲವು ಚುನಾವಣಾ ಪೂರ್ವ ಸಮೀಕ್ಷೆಗಳು ಪ್ರಕಟವಾಗಿದ್ದು, ಅದರಲ್ಲಿ ಮೋದಿ ಪಾಲಿಗೆ ಈ ಬಾರಿಯ ಚುನಾವಣೆ ಅಗ್ನಿ ಪರೀಕ್ಷೆಯಾಗಲಿದೆ ಎಂಬ ಸೂಚನೆ ಸಿಕ್ಕಿದೆ.

ಮೋದಿ ವಿರೋಧಿಗಳು ಕೈ ಜೋಡಿಸಿದ್ರೆ ಪ್ರಧಾನಿ ಮೋದಿ ನೇತೃತ್ವದ ಎನ್‍ಡಿಎ ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ ಆಗಲಿದೆ. ಅದರಲ್ಲೂ ಇಂಡಿಯಾ ಟಿವಿ-ಸಿಎನ್‌ಎಕ್ಸ್‌ ಸಮೀಕ್ಷೆ ಪ್ರಕಾರ, ಉತ್ತರ ಪ್ರದೇಶದಲ್ಲಿ ಎಸ್‍ಪಿ-ಬಿಎಸ್‍ಪಿ ಮಹಾ ಮೈತ್ರಿಯಿಂದ ಬಿಜೆಪಿ ಭಾರೀ ಮುಖಭಂಗ ಅನುಭವಿಸಲಿದೆ. ಕರ್ನಾಟಕದಲ್ಲಿ ದೋಸ್ತಿ ಮೇಲುಗೈ ಸಾಧಿಸಲಿದೆ ಎನ್ನುತ್ತಿವೆ ಸಮೀಕ್ಷೆಗಳು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‍ಮೇಕರ್ ಆಗಲಿವೆ. ಇತರೆ ಪಕ್ಷಗಳು 121 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕೇಂದ್ರದ ಅಧಿಕಾರದ ಗದ್ದುಗೆಗೆ ಏರುವವರು ಯಾರು ಎಂಬುದನ್ನು ಈ ಬಾರಿ ನಿರ್ಧರಿಸಲಿವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​​ಡಿಎ 275, ಕಾಂಗ್ರೆಸ್​​ ನೇತೃತ್ವದ ಯುಪಿಎ 147 ಸ್ಥಾನಗಳಲ್ಲಿ ಗೆಲ್ಲಲಿವೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ.

ಒಟ್ಟು 543 ಲೋಕಸಭಾ ಕ್ಷೇತ್ರಗಳ ಪೈಕಿ ಸ್ಪಷ್ಟ ಬಹುಮತಕ್ಕೆ ಬೇಕಾದ 273 ಸ್ಥಾನಗಳನ್ನು ಯಾವೊಂದು ಮೈತ್ರಿಕೂಟವೂ ಈ ಬಾರಿ ಗೆಲ್ಲುವುದು ಕಷ್ಟ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಂದೇ ಪಕ್ಷ 266 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ಇಬ್ಬರು ನಾಮನಿರ್ದೇಶಿತ ಸದಸ್ಯರೂ ಸೇರಿದಂತೆ ಕಳೆದ ಬಾರಿ ಎನ್‍ಡಿಎ ಮೈತ್ರಿಕೂಟದ ಒಟ್ಟು ಸದಸ್ಯರ ಸಂಖ್ಯೆ 305. ಆದರೆ, ಈ ಬಾರಿ ಎನ್‍ಡಿಎ ಬಲ ಕುಸಿಯಲಿದೆ ಎನ್ನಲಾಗಿದೆ.

Comments are closed.