ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ಮತ್ತು 35 ಎ ವಿಧಿಗಳನ್ನು ರದ್ದುಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದೆ. ಇದನ್ನು ವಿರೋಧಿಸಿ ಹೇಳಿಕೆ ನೀಡಿದ್ದಲ್ಲದೆ, ಭಾರತದ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಜಮ್ಮು ಮತ್ತು ಕಾಶ್ಮೀರದ ಮೂವರು ಮುಖಂಡರ ವಿರುದ್ಧ ದೆಹಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.
ಫಾರೂಕ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಆದರೆ, ಈ ಮೂವರು ಮುಖಂಡರು ಭಾರತೀಯ ಸಂವಿಧಾನದ 370 ಮತ್ತು 35ಎ ವಿಧಿಗಳನ್ನು ರದ್ದುಗೊಳಿಸುವ ವಿಷಯವಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ. ಆದ್ದರಿಂದ, ಈ ಮೂವರು ಮುಖಂಡರ ನಾಮಪತ್ರಗಳನ್ನು ತಿರಸ್ಕರಿಸಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ್ದ ಈ ಮೂವರು ಮುಖಂಡರು ಸಂವಿಧಾನದ 370 ಮತ್ತು 35 ಎ ವಿಧಿಗಳನ್ನು ಹೇಗೆ ರದ್ದು ಮಾಡುತ್ತಾರೋ ನೋಡಿಕೊಳ್ಳುತ್ತೇವೆ. ಒಂದು ವೇಳೆ ರದ್ದು ಮಾಡಿದರೆ ಅದರ ವಿರುದ್ಧ ಹೋರಾಟ ಮಾಡುತ್ತೇವೆ. ಇದಕ್ಕೂ ಮಣಿಯದಿದ್ದರೆ ಭಾರತದಿಂದಲೇ ಪ್ರತ್ಯೇಕಗೊಳ್ಳುತ್ತೇವೆ ಎಂದು ಹೇಳಿದ್ದರು.
Comments are closed.