ನವದಹೆಲಿ: ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ರೆಬೆಲ್ ಸ್ಟಾರ್ ಮತ್ತು ಫೈರ್ ಬ್ರಾಂಡ್ ಶತೃಘ್ನ ಸಿನ್ಹಾ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಲು ನನಗಿಷ್ಟ ಎಂದು ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ವತಿಯಿಂದ ಈಗಾಗಲೇ ಬಿಹಾರದ ಪಾಟ್ಮಾ ಸಾಹಿಬ್ ಕ್ಷೇತ್ರದಿಂದ ಟಿಕೆಟ್ ಪಡೆದಿರುವ ಶತೃಘ್ನ ಸಿನ್ಹಾ ಇದೀಗ ತಾವು ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಸ್ಪರ್ಧಿಸಲು ಸಿದ್ಧ ಎಂದು ಹೇಳಿದ್ದು, ಅವಕಾಶ ಸಿಕ್ಕರೆ ಅವರ ವಿರುದ್ಧ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಅಂತೆಯೇ ಬಿಜೆಪಿ ವಿರುದ್ಧ ತಮ್ಮ ಟೀಕಾ ಪ್ರಹಾರವನ್ನು ಮುಂದುವರೆಸಿರುವ ಅವರು, ಬಿಜೆಪಿಯವರು ಮೂರ್ಖರೊಂದಿಗೆ ಬದುಕುತ್ತಿದ್ದಾರೆ. ಅವರು ಹಾಗೆಯೇ ಇರಲಿ ಬಿಡಿ.. ಪಾಟ್ನಾ ಸಾಹಿಬ್ ಜನತೆ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಇನ್ನು ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕಳೆದ 2 ಬಾರಿ ಆರಿಸಿ ಬಂದಿದ್ದ ಶತೃಘ್ನ ಸಿನ್ಹಾ ಅವರಿಗೆ ಹಾಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಹೀಗಾಗಿ ಶತೃಘ್ನ ಸಿನ್ಹಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ ಪಕ್ಷ ಅವರಿಗೆ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.
Comments are closed.