ರಾಷ್ಟ್ರೀಯ

ಬಿಎಸ್‍ಪಿ ಮುಖಂಡ, ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ

Pinterest LinkedIn Tumblr


ಲಕ್ನೋ: ಉತ್ತರ ಪ್ರದೇಶದಲ್ಲಿ ಗನ್‍ಗಳು ಸದ್ದು ಮಾಡಿದ್ದು, ಈ ಬಾರಿ ಬಿಎಸ್‍ಪಿ ಮುಖಂಡ ಹಾಗೂ ಸೋದರಳಿಯ ಬಲಿಯಾಗಿದ್ದಾರೆ.

ಬಿಎಸ್‍ಪಿ ಮುಖಂಡ ಹಜಿ ಅಹ್ಸಾನ್ ಹಾಗೂ ಸೋದರಳಿಯ ಶಾದಾಬ್ ದುಷ್ಕರ್ಮಿಗಳ ಗುಂಡಿಗೆ ಬಲಿಯಾದವರು. ಬಿಜ್ನೋರ್ ಜಿಲ್ಲೆಯ ನಜಿಬಾಬಾದ್ ಪಟ್ಟಣದಲ್ಲಿ ಮಧ್ಯಾಹ್ನ 3 ಗಂಟೆಗೆ ಘಟನೆ ನಡೆದಿದೆ.

ಈ ಕುರಿತು ನಜಿಬಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಅಮೇಠಿಯ ನೂತನ ಸಂಸದೆ ಸ್ಮೃತಿ ಇರಾನಿ ಅವರ ಆಪ್ತ ಸುರೇಂದ್ರ ಸಿಂಗ್ ಅವರನ್ನು ಶನಿವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಸೋಮವಾರ ಪೊಲೀಸರು ಬಂಧಿಸಿದ್ದು, ಇನ್ನುಳಿದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಶನಿವಾರ ರಾತ್ರಿ ಸುರೇಂದ್ರ ಸಿಂಗ್ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡುವ ಪ್ರಯತ್ನ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದರು. ಸ್ಮೃತಿ ಇರಾನಿ ಅವರು ಸುರೇಂದ್ರ ಸಿಂಗ್ ಅವರ ಪಾರ್ಥಿವ ಶರೀರ ಮೆರವಣಿಗೆ ವೇಳೆ ಹೆಗಲು ನೀಡಿದ್ದರು.

Comments are closed.