ರಾಷ್ಟ್ರೀಯ

ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಖಾಸಗಿ ಬಸ್ ಕಂದಕಕ್ಕೆ ಉರುಳಿ 25 ಮಂದಿ ಸಾವು, 35 ಪ್ರಯಾಣಿಕರಿಗೆ ಗಾಯ

Pinterest LinkedIn Tumblr

ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 25 ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಡೆದಿದೆ.

ಭೀಕರ ಅಪಘಾತದಲ್ಲಿ 35 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಜಾರಾ ಪ್ರದೇಶದಿಂದ ಕುಲ್ಲು ಜಿಲ್ಲೆಯ ಗಡಗುಶಾನಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ 300 ಮೀಟರ್ ಆಳವಾದ ಕಂದಕಕ್ಕೆ ಉರುಳಿದೆ ಎಂದು ಕುಲ್ಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಲಿನಿ ಅಗ್ನಿಹೋತ್ರಿ ಅವರು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

Comments are closed.