ಸರನ್: ಸೈಕಲ್‌ನಲ್ಲಿ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ 17 ವರ್ಷದ ಬಾಲಕಿಯನ್ನು ಕಾರಿನೊಳಗೆ ಬಲವಂತವಾಗಿ ಕರೆದುಕೊಂಡು ಹೋಗಿ ಮೂವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಸರಣ್‌ನಲ್ಲಿ ನಡೆದಿದೆ.
ಸದ್ಯ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತಿಬ್ಬರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಶುಕ್ರವಾರ ಮಧ್ಯಾಹ್ನ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ತಡೆದ ಆರೋಪಿ ಆಕೆಯನ್ನು ಕಾರಿನೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಕಾರಿನಲ್ಲಿದ್ದ ಮತ್ತಿಬ್ಬರು ಸೇರಿಕೊಂಡು ಅತ್ಯಾಚಾರ ಎಸಗಿದ ಬಳಿಕ ಬಸಂತ್ ರಸ್ತೆಯಲ್ಲಿ ಕಾರಿನಿಂದ ಹೊರಗೆ ಎಸೆದು ಹೋಗಿದ್ದಾರೆ ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಹರಿಕಿಶೋರ್ ರೈ ತಿಳಿಸಿದ್ದಾರೆ.
ಮನೆಯಿಂದ ಕೆಲವೇ ಕಿ.ಮೀ ದೂರದಲ್ಲಿದ್ದ ಬಾಲಕಿಯು ದಾರಿಹೋಕರಿಂದ ಮೊಬೈಲ್ ಪಡೆದು ಪಾಲಕರಿಗೆ ವಿಷಯವನ್ನು ತಿಳಿಸಿದ್ದಾಳೆ. ಸದ್ಯ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ.
ಕಾರಿನಲ್ಲಿ ಐವರು ಇದ್ದರು. ಅವರಲ್ಲಿ ಮೂವರು ಅತ್ಯಾಚಾರ ಎಸಗಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧಕಾರ್ಯ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Comments are closed.