ರಾಷ್ಟ್ರೀಯ

ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​​ ವಿಧಿವಶ

Pinterest LinkedIn Tumblr

ನವದೆಹಲಿ: ಮಾಜಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​​​ ಅವರು, ಮಂಗಳವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 67 ವರ್ಷದ ಬಿಜೆಪಿ ಸಂಸದೆ ಇಂದು ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ಧಾರೆ.

ಅವರು ಕೆಲವು ತಿಂಗಳುಗಳಿಂದ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ರಾತ್ರಿ ಇದ್ದಕ್ಕಿದ್ದಂತೆ ಹೃದಯಾಘಾತವಾಗಿದ್ದು, ತತ್ಕ್ಷಣ ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು . ನಿತಿನ್ ಗಡ್ಕರಿ, ಹರ್ಷವರ್ಧನ್ ರಾಥೋಡ್ ಮೊದಲಾದವರು ಆಸ್ಪತ್ರೆಗೆ ತೆರಳಿದ್ದಾರೆ.

ಎನ್ಡಿಎ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಾಗ ಮಂತ್ರಿ ಪದವಿಯಿಂದ ದೂರ ಉಳಿಯಲು ಬಯಸಿದ್ದರು. ಇದಕ್ಕೆ ತಮ್ಮ ಅನಾರೋಗ್ಯದ ಕಾರಣವನ್ನು ನೀಡಿದ್ದರು.

1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು.

ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ ಬಳ್ಳಾರಿಯಿಂದ 1999 ರಲ್ಲಿ ಲೋಕಸಭೆಗೆ ಸ್ಪರ್ಧೆ ಮಾಡಿದ್ದರು. ಸುಷ್ಮಾ ಸ್ವರಾಜ್ ಮತ್ತು ಸೋನಿಯಾ ಗಾಂಧಿ ನಡುವಿನ ರಾಜಕೀಯ ಸಮರ ಇಡೀ ದೇಶದ ಗಮನ ಸೆಳೆದಿತ್ತು.

ಸುಷ್ಮಾ ಸ್ವರಾಜ್ ಭಾರತೀಯ ರಾಜಕಾರಣಿ. ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ವಕೀಲೆ. ಇವರು ಸಂಸದೆಯಾಗಿ ಏಳು ಬಾರಿ ಮತ್ತು ವಿಧಾನ ಸಭಾ ಸದಸ್ಯೆಯಾಗಿ ಮೂರು ಬಾರಿ ಆಯ್ಕೆಯಾಗಿದ್ದಾರು.  1973ರಲ್ಲಿ ಸುಪ್ರೀಂ ಕೋರ್ಟ್ ವಕೀಲೆಯಾಗಿ ಕಾರ್ಯ ಆರಂಭಿಸಿದ್ದರು.

Comments are closed.