ಹೊಸದಿಲ್ಲಿ: ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ವಶದಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರನ್ನು ಇನ್ನೂ ನಾಲ್ಕು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ.
ಕಳೆದ ಆಗಸ್ಟ್ 23ರಂದು ಚಿದಂಬರಂ ಅವರನ್ನು ನಾಲ್ಕು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿತ್ತು. ಆಗಸ್ಟ್ 26ರಂದು ಕಸ್ಟಡಿ ಅವಧಿ ಮುಗಿದಿದೆ.
ಚಿದಂಬರಂ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ. ಇನ್ನಷ್ಟು ಮಾಹಿತಿಯನ್ನು ಪಡೆಯಬೇಕಾಗಿದೆ ಎಂದು ಸಿಬಿಐ ಪರ ವಕೀಲರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆಎನ್ ನಟರಾಜನ್ ವಾದಿಸಿದರು.
ಇನ್ನೂ ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಬೇಕೆಂದು ವಕೀಲರು ಮಾಡಿದರು.
ಇದನ್ನು ಪುರಸ್ಕರಿಸಿದ ನ್ಯಾಯಾಲಯ ಶುಕ್ರವಾರದವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.
ಹೆಚ್ಚುವರಿ ಮಾಹಿತಿ ಪಡೆಯಲು ವಿಚಾರಣೆ ಅಗತ್ಯವಿದೆ ವಕೀಲರು ವಾದಿಸಿದಾಗ ನಾಲ್ಕು ದಿನಗಳ ಏನು ಮಾಡಿದಿರಿ ಎಂದು ನ್ಯಾಯಾಧೀಶರು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ವಿಚಾರಣೆಯ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ಕಸ್ಟಡಿ ಅವಧಿಯನ್ನು ವಿಸ್ತರಿಸಬೇಕೆಂದು ಸಿಬಿಐ ಪರ ವಕೀಲರ ವಾದಕ್ಕೆ ಚಿದಂಬರಂ ಪರ ವಕೀಲ ಕಪಿಲ್ ಸಿಬಲ್ ವಿರೋಧ ವ್ಯಕ್ತಪಡಿಸಿದರು.
Comments are closed.