ರಾಷ್ಟ್ರೀಯ

ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ ಬಾಸ್ ರಿಯಾಲಿಟಿ ಶೋ ಕೂಡಲೇ ನಿಲ್ಲಿಸುವಂತೆ ಆಗ್ರಹ

Pinterest LinkedIn Tumblr

ಬಿಜೆಪಿಯ ಉತ್ತರಪ್ರದೇಶದ ಗಾಜಿಯಾಬಾದ್ ಶಾಸಕ ನಂದಕಿಶೋರ್ ಗುಜ್ಜರ್, ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ ಬಾಸ್ ರಿಯಾಲಿಟಿ ಶೋ ಅನ್ನು ಕೂಡಲೇ ನಿಲ್ಲಿಸುವಂತೆ ಕೇಂದ್ರ ವಾರ್ತಾ ಹಾಗೂ ಪ್ರಸಾರ ಖಾತೆ ಮಂತ್ರಿ ಪ್ರಕಾಶ್ ಜಾವಡೇಕರ್ ಅವರನ್ನು ಪತ್ರದ ಮೂಲಕ ಆಗ್ರಹಿಸಿದ್ದಾರೆ.

ನಂದಕಿಶೋರ್ ಅವರು ತಮ್ಮ ಪತ್ರದಲ್ಲಿ, ಬಿಗ್ ಬಾಸ್ ಶೋ ನಲ್ಲಿ ಬೇರೆ ಬೇರೆ ಜನಾಂಗಕ್ಕೆ ಸೇರಿದ ಗಂಡು-ಹೆಣ್ಣುಗಳು ಒಂದೇ ಹಾಸಿಗೆಯನ್ನು ಹಂಚಿಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋನಿಂದ ಜನರಿಗೆ ಕೆಟ್ಟ ಸಂದೇಶ ರವಾನೆಯಾಗಲಿದ್ದು, ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಇದರ ಜೊತೆಗೆ ಉತ್ತರಪ್ರದೇಶ ನವನಿರ್ಮಾಣ ಸೇನೆಯ ಅಧ್ಯಕ್ಷ ಅಮಿತ್ ಜಾನಿ, ನಾನು ಬಿಗ್ ಬಾಸ್ ಬ್ಯಾನ್ ಆಗೋವರೆಗೂ ದವಸ ಧಾನ್ಯಗಳಿಂದ ಮಾಡಿದ ಆಹಾರವನ್ನು ಸೇವಿಸುವುದಿಲ್ಲ. ಬರೀ ಹಣ್ಣು-ತರಕಾರಿಯಿಂದಲೇ ಜೀವಿಸುತ್ತೇನೆ ಎಂದು ತಿಳಿಸಿದ್ದಾರೆ.

Comments are closed.