ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರು ಸಕ್ರಿಯರಾಗಿದ್ದಾರೆ ಎಂಬುದಕ್ಕೆ ಯೋಧರ ಮೇಲೆ ಉಗ್ರರು ಭಾರೀ ವಿಧ್ವಂಸಕ ಕೃತ್ಯ ನಡೆಸಲು ವಿಫಲ ಯತ್ನ ನಡೆಸಿರುವುದು ಸಾಕ್ಷಿಯಾಗಿದೆ. ಸಿಆರ್‍ಪಿಎಫ್ ತಂಡದ ಮೇಲೆ ಉಗ್ರರು ಗ್ರೆನೇಡ್ ಎಸೆದ ಪರಿಣಾಮ ಎಂಟು ಯೋಧರು ಗಾಯಗೊಂಡಿರುವ ಘಟನೆ ಶ್ರೀನಗರದ ಕರಣ್ ನಗರ ಪ್ರದೇಶದಲ್ಲಿ ನಡೆದಿದೆ.
ಗ್ರೆನೇಡ್ ದಾಳಿ ನಡೆದಾಗ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‍ಪಿಎಫ್) ತಂಡವು ತಪಾಸಣಾ ಕೇಂದ್ರವನ್ನು ನಿರ್ವಹಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗ್ರೆನೇಡ್ ಸ್ಫೋಟದ ಕಾರಣ ಸುತ್ತಮುತ್ತಲಿನ ಪ್ರದೇಶದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.
ಇದೇ ವೇಳೆ ಉಗ್ರ ದಾಳಿಯ ಬಳಿಕ ಪ್ರತಿಯಾಗಿ ಭದ್ರತಾ ಪಡೆಗಳು ಸಹ ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿದೆ ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಯೋಧರ ಮೇಲೆ ಗ್ರೆನೇಡ್ ದಾಳಿ ನಡೆಸಿ ಪರಾರಿಯಾಗಿರುವ ಉಗ್ರರಿಗಾಗಿ ಶ್ರೀನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಶೋಧ ಮುಂದುವರೆದಿದೆ.
Comments are closed.