ರಾಷ್ಟ್ರೀಯ

ಪಾಕ್‌ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೈನಿಕ ಬಲಿ

Pinterest LinkedIn Tumblr

ಶ್ರೀನಗರ: ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ಜಮ್ಮು ಹಾಗೂ ಕಾಶ್ಮೀರ ಪ್ರದೇಶದೊಳಗೆ ನುಗ್ಗಲು ಪ್ರಯತ್ನಿಸುತ್ತಿದ್ದ ಉಗ್ರರ ಜೊತೆ ವೀರಾವೇಶದಿಂದ ಹೋರಾಡಿದ ಬೆಳಗಾವಿ ಜಿಲ್ಲೆ ಉಚ್ಚಗಾವ್‌ನ ಯೋಧ ರಾಹುಲ್ ಭೈರು ಸುಳಗೇಕರ್ (21) ಹುತಾತ್ಮರಾದರು.

ಪಾಕ್‌ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ಸೂಕ್ತ ಪ್ರತ್ಯುತ್ತರ ನೀಡಿತು. ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸುಳಗೇಕರ್‌ ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ರಾಹುಲ್‌ ಹುತಾತ್ಮರಾದರು.

ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿ, ಗುರುವಾರ ನಸುಕಿನ ಜಾವ 2.30ರ ವೇಳೆಗೆ ಯದ್ವಾತದ್ವಾ ಗುಂಡಿನ ಮಳೆ ಸುರಿಯುತ್ತಿದ್ದರು. ಗುಂಡಿನ ಮಳೆಯ ಆಶ್ರಯ ಪಡೆದ ಉಗ್ರರು ಕಾಶ್ಮೀರದೊಳಗೆ ನುಗ್ಗಲು ಪ್ರಯತ್ನಿಸುತ್ತಿದ್ದರು. ಆ ವೇಳೆ ಗಡಿಯಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ಸೈನಿಕರೂ ಪ್ರತಿದಾಳಿ ನಡೆಸಿ, ಪ್ರತ್ಯುತ್ತರ ನೀಡಿದರು. ಅವರ ತ್ಯಾಗ ಹಾಗೂ ಬಲಿದಾನಕ್ಕೆ ಇಡೀ ದೇಶ ಋಣಿಯಾಗಿರುತ್ತದೆ’ ಎಂದು ವಕ್ತಾರರು ಕಂಬನಿ ಸುರಿಸಿದ್ದಾರೆ.

Comments are closed.