ರಾಷ್ಟ್ರೀಯ

ಪೌರತ್ವ ತಿದ್ದುಪಡಿ ಕಾಯ್ದೆ: ಉತ್ತರಪ್ರದೇಶದಲ್ಲಿ ಗೋಲಿಬಾರ್‌ಗೆ 6 ಬಲಿ!

Pinterest LinkedIn Tumblr

ಲಖನೌ: ಪೌರತ್ವದ ಕಿಚ್ಚು ಉತ್ತರಪ್ರದೇಶಕ್ಕೂ ವ್ಯಾಪಿಸಿದ್ದು ಪೊಲೀಸರ ಗುಂಡೇಟಿಗೆ ಆರು ಮಂದಿ ಬಲಿಯಾಗಿದ್ದಾರೆ.

ಉತ್ತರಪ್ರದೇಶದ ಬಿಜನೂರ್, ಮೀರೂತ್, ಸಂಬಾಲ್ ಮತ್ತು ಫಿರೋಜಾಬಾದ್ ನಲ್ಲಿ ಪೊಲೀಸರ ಗುಂಡೇಟಿನಲ್ಲಿ ಆರು ಮಂದಿ ಬಲಿಯಾಗಿದ್ದಾರೆ. ಇದೇ ವೇಳೆ 50ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ ಎಂದು ಉತ್ತರ ಪ್ರದೇಶ ಡಿಜಿಪಿ ಒಪಿ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು ಕೆಲ ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

Comments are closed.