ರಾಷ್ಟ್ರೀಯ

ಫೆಬ್ರವರಿ 1ರಂದು ಕೇಂದ್ರ ಬಜೆಟ್ !

Pinterest LinkedIn Tumblr

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಈ ವರ್ಷ ಎರಡು ಹಂತಗಳಲ್ಲಿ ಜನವರಿ 31ರಿಂದ ಏಪ್ರಿಲ್ 3ರವರೆಗೆ ನಡೆಯಲಿದೆ.

ಬಿಜೆಪಿ ನೇತೃತ್ವದ ಎನ್ ಡಿಎ-2 ಸರ್ಕಾರದ ಪೂರ್ಣ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ. 2020-21ನೇ ಸಾಲಿನ ಕೇಂದ್ರ ಬಜೆಟ್ ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಮೊದಲ ಹಂತದ ಬಜೆಟ್ ಅಧಿವೇಶನ ಜನವರಿ 31ರಿಂದ ಫೆಬ್ರವರಿ 11ರವರೆಗೆ ನಡೆಯಲಿದೆ.

ನಂತರ ಅಲ್ಪ ವಿರಾಮದ ಬಳಿಕ ಎರಡನೇ ಹಂತದ ಅಧಿವೇಶನ ಮಾರ್ಚ್ 2ರಿಂದ ಏಪ್ರಿಲ್ 3ರವರೆಗೆ ನಡೆಯಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಭೇಟಿ ಮಾಡಿ ಬಜೆಟ್ ಅಧಿವೇಶನದ ವೇಳಾಪಟ್ಟಿಯನ್ನು ಶಿಫಾರಸು ಮಾಡಿದೆ.

ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಸಿಎಎ, ಎನ್ ಆರ್ ಸಿ ಮತ್ತು ಎನ್ ಪಿಆರ್ ಪ್ರತಿಭಟನೆಗಳ ಮಧ್ಯೆ ಬಜೆಟ್ ಅಧಿವೇಶನ ಮಹತ್ವ ಪಡೆದಿದೆ.

Comments are closed.