ರಾಷ್ಟ್ರೀಯ

ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಫೆ.1ರಂದು ನೇಣುಗಂಬಕ್ಕೇರಿಸಿ: ದಿಲ್ಲಿ ಕೋರ್ಟ್

Pinterest LinkedIn Tumblr


ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳನ್ನು ಫೆಬ್ರುವರಿ 1ರ ಬೆಳಗ್ಗೆ 6ಗಂಟೆಗೆ ಗಲ್ಲಿಗೇರಿಸುವಂತೆ ದಿಲ್ಲಿ ಕೋರ್ಟ್ ಶುಕ್ರವಾರ ಹೊಸ ಡೆತ್ ವಾರಂಟ್ ಹೊರಡಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ನಿರ್ಭಯಾ ಪ್ರಕರಣದಲ್ಲಿ ಅಪರಾಧಿಗಳಲ್ಲಿ ಒಬ್ಬನಾದ ಮುಕೇಶ್ ಸಿಂಗ್ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದ. ಆದರೆ ಕೇಂದ್ರ ಸರ್ಕಾರ ಹಾಗೂ ದಿಲ್ಲಿ ಸರ್ಕಾರ, ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ಶಿಫಾರಸ್ಸಿನಂತೆ ಅರ್ಜಿಯನ್ನು ರಾಷ್ಟ್ರಪತಿ ವಜಾಗೊಳಿಸಿದ್ದರು.

ಕ್ಷಮಾದಾನ ಅರ್ಜಿ ವಜಾಗೊಳಿಸಿದ ಬಳಿಕ 14 ದಿನಗಳ ಕಾಲಾವಕಾಶ ನೀಡಬೇಕು ಎಂಬುದು ಕಾನೂನು ಇದ್ದಿರುವ ಹಿನ್ನೆಲೆಯಲ್ಲಿ ದಿಲ್ಲಿ ಕೋರ್ಟ್ ಇದೀಗ ನಾಲ್ವರು ಆರೋಪಿಗಳನ್ನು ಫೆ.1ರಂದು ಬೆಳಗ್ಗೆ 1ಗಂಟೆಗೆ ಗಲ್ಲಿಗೇರಿಸಲು ಹೊಸ ಡೆತ್ ವಾರಂಟ್ ಹೊರಡಿಸಿದೆ.

ಈ ಮೊದಲು ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಜನವರಿ 22ರಂದು ಬೆಳಗ್ಗೆ 7ಗಂಟೆಗೆ ನಾಲ್ವರನ್ನು ಗಲ್ಲಿಗೇರಿಸುವಂತೆ ಡೆತ್ ವಾರಂಟ್ ಹೊರಡಿಸಿತ್ತು. ಏತನ್ಮಧ್ಯೆ ಅಪರಾಧಿ ಮುಕೇಶ್ ಸಿಂಗ್ ಕ್ಷಮಾದಾನ ಅರ್ಜಿ ಸಲ್ಲಿಸಿದ್ದರಿಂದ ಜ.22ರಂದು ಗಲ್ಲಿಗೇರಿಸಲು ತಡೆ ನೀಡಬೇಕೆಂದು ಕೋರಿ ದಿಲ್ಲಿ ಸರ್ಕಾರ ಕೋರ್ಟ್ ಗೆ ಮನವಿ ಮಾಡಿತ್ತು.

Comments are closed.