ರಾಷ್ಟ್ರೀಯ

ಶಿಕ್ಷಣ ರಂಗಕ್ಕೆ 99,300 ಕೋಟಿ ರೂ; ಶಿಕ್ಷಣ ರಂಗದಲ್ಲೂ ವಿದೇಶಿ ಬಂಡವಾಳ ಹೂಡಿಕೆಗೆ ಕ್ರಮ: ಕೇಂದ್ರ ಬಜೆಟ್ 2020

Pinterest LinkedIn Tumblr

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಿದ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ನಲ್ಲಿ ಶಿಕ್ಷಣ ರಂಗಕ್ಕೆ ಸುಮಾರು 99,300 ಕೋಟಿ ರೂ ಮೀಸಲಿರಿಸುವುದಾಗಿ ಘೋಷಣೆ ಮಾಡಿದ್ದಾರೆ.

ಶಿಕ್ಷಣ ಕ್ಷೇತ್ರದ ಕುರಿತು ತಮ್ಮ ಬಜೆಟ್ ನಲ್ಲಿ ಕೈಗೊಂಡಿರುವ ಕ್ರಮದ ಕುರಿತು ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು, ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ನಲ್ಲಿ ಶಿಕ್ಷಣ ರಂಗಕ್ಕೆ 99,300 ಕೋಟಿ ರೂ ಮೀಸಲಿರಿಸುವುದಾಗಿ ಘೋಷಣೆ ಮಾಡಿದರು. ಇದಲ್ಲದೆ ಕೌಶಲಾಭಿವೃದರ್ಧಿಗೆ 3,000 ಕೋಟಿ ರೂ ಅನುದಾನ ನೀಡಲಾಗುತ್ತದೆ. ಅಂತೆಯೇ ಶಿಕ್ಷಣ ರಂಗದಲ್ಲೂ ವಿದೇಶಿ ಬಂಡವಾಳ ಹೂಡಿಕೆಗೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಈ ಸಂಬಂಧ ಹೊಸ ಶಿಕ್ಷಣ ನೀತಿ ಶೀಘ್ರವೇ ಘೋಷಣೆ ಮಾಡುವುದಾಗಿ ಹಣಕಾಸು ಸಚಿವರು ಪ್ರಕಟಿಸಿದರು. ‘2030ರ ಹೊತ್ತಿಗೆ ಜಗತ್ತಿನ ಅತಿಹೆಚ್ಚು ಉದ್ಯೋಗಕ್ಕೆ ಸಿದ್ಧರಿರುವ ಜನರು ನಮ್ಮ ದೇಶದಲ್ಲಿ ಇರುತ್ತಾರೆ. ಹೊಸ ಶಿಕ್ಷಣ ನೀತಿಗೆ 2 ಲಕ್ಷಕ್ಕೂ ಹೆಚ್ಚು ಸಲಹೆಗಳು ಬಂದಿವೆ. ಶೀಘ್ರ ಹೊಸ ಶಿಕ್ಷಣ ನೀತಿ ಘೋಷಿಸುತ್ತೇವೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎಂಜಿನಿಯರ್‌ಗಳಿಗೆ ಇಂಟರ್ನ್‌ಶಿಪ್ ಅವಕಾಶ. ಆನ್‌ಲೈನ್‌ನಲ್ಲಿ ಪದವಿ ಶಿಕ್ಷಣಕ್ಕೆ ಅವಕಾಶ ನೀಡಲಾಗುತ್ತದೆ. ನ್ಯಾಷನಲ್ ಪೊಲೀಸ್‌ ವಿಶ್ವವಿದ್ಯಾಲಯ ಮತ್ತು ಫೊರೆನ್ಸಿಕ್ ವಿಶ್ವವಿದ್ಯಾಲಯಗಳ ಕುರಿತೂ ನಿರ್ಮಲಾ ಪ್ರಸ್ತಾವನೆ ಮಂಡಿಸಿದರು.

ಅಲ್ಲದೆ ರಾಷ್ಟ್ರೀಯ ಪರೀಕ್ಷಾ ಮಂಡಳಿಯ ಮೂಲಕ ಡಿಪ್ಲೊಮಾ ಮತ್ತು ಫೆಲೊ ಆಫ್ ನ್ಯಾಷನಲ್ ಬೋರ್ಡ್‌ ವಿದ್ಯಾಭ್ಯಾಸಕ್ಕೆ ಅವಕಾಶ. ನರ್ಸ್‌ಗಳ ಕೌಶಲ ವೃದ್ಧಿಗಾಗಿ ವಿಶೇಷ ಯೋಜನೆ. ಭಾರತ ಸಂಜಾತ ನರ್ಸ್‌ಗಳಿಗೆ ವಿದೇಶಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ಯೋಜನೆ ರೂಪಿಸಲಾಗುತ್ತದೆ. ಅಂತೆಯೇ ಸುಮಾರು 150 ಉನ್ನತ ಶಿಕ್ಷಣ ಸಂಸ್ಥೆಗಳು 2021 ರ ವೇಳೆಗೆ ಅಪ್ರೆಂಟಿಸ್‌ಶಿಪ್ ಕೋರ್ಸ್‌ಗಳನ್ನು ಪ್ರಾರಂಭಿಸಲಿದೆ ಎಂದು ಹೇಳಿದರು.

Comments are closed.