ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅನ್ನು ಘೋಷಿಸಿದ ಬೆನ್ನಲ್ಲೇ ಮೊದಲ ಬಾರಿಗೆ ಉತ್ತರಪ್ರದೇಶದ ಪ್ರಯಾಗ್ ರಾಜ್ ಜಿಲ್ಲೆಯಲ್ಲಿ ಸಭೆ ನಡೆಯಲಿದೆ ಎಂದು ವರದಿ ತಿಳಿಸಿದೆ.
ಜೀ ನ್ಯೂಸ್ ಮೂಲಗಳ ಪ್ರಕಾರ, ರಾಮಮಂದಿರ ನಿರ್ಮಾಣಕ್ಕಾಗಿ ನೂತನ ಟ್ರಸ್ಟ್ ಘೋಷಿಸಿದ ನಂತರ ಮೊದಲ ಸಭೆ ಪ್ರಯಾಗ್ ರಾಜ್ ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಈ ಬಗ್ಗೆ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿಸಿದೆ.
ರಾಮಮಂದಿರ ನಿರ್ಮಾಣಕ್ಕಾಗಿ ದೇಣಿಗೆ ನೀಡುವವರಿಗಾಗಿ ಟ್ರಸ್ಟ್ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ತೆರೆಯಲಾಗಿದೆ ಎಂದು ವರದಿ ಹೇಳಿದೆ. ಸಭೆಯಲ್ಲಿ ರಾಮ ಜನ್ಮಭೂಮಿ ನ್ಯಾಸ್ ಹಾಗೂ ಅಯೋಧ್ಯೆಯಲ್ಲಿ ಬಹು ಗೌರವಾನ್ವಿತ ಶ್ರೀ ಎನ್ನಿಸಿಕೊಂಡಿರುವ ಮಹಾಂತ್ ನಿತ್ಯ ಗೋಪಾಲ್ ದಾಸ್ ಅವರನ್ನು ಟ್ರಸ್ಟ್ ನ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದ್ದಿರುವುದಾಗಿ ಹೇಳಿದೆ.
Comments are closed.