ಭುವನೇಶ್ವರ: ಅನೈತಿಕ ಸಂಬಂಧವನ್ನು ವಿರೋಧಿಸಿದ್ದಕ್ಕೆ 45 ವರ್ಷದ ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಒಡಿಶಾದ ಜಾಜ್‍ಪುರ ಜಿಲ್ಲೆಯಲ್ಲಿ ನಡೆದಿದೆ.
ನ್ಯೂ ಮಾರ್ಕೆಟ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಮಹಿಳೆ ಶೇ.80 ರಷ್ಟು ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ. ಮಾಹಿತಿ ತಿಳಿದು ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ. ಇಬ್ಬರ ನಡುವಿನ ಜಗಳದ ನಂತರ ಆರೋಪಿ ತನ್ನ ಹೆಂಡತಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಏನಿದು ಪ್ರಕರಣ?
ಆರೋಪಿ ಅದೇ ಪ್ರದೇಶದ ಬೇರೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು. ಇದೇ ವಿಚಾರಕ್ಕೆ ಪತಿ ಮತ್ತು ಪತ್ನಿ ಇಬ್ಬರ ಮಧ್ಯೆ ಜಗಳ ನಡೆಯುತ್ತಿತ್ತು. ಅಷ್ಟೇ ಅಲ್ಲದೇ ಆರೋಪಿ ತನ್ನ ಪತ್ನಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆ ಅನೈತಿಕ ಸಂಬಂಧರ ಬಗ್ಗೆ ತನ್ನ ಪತಿಯೊಂದಿಗೆ ಜಗಳ ಮಾಡಿದ್ದಾಳೆ. ಇದರಿಂದ ಕೋಪಗೊಂಡ ಆರೋಪಿ ತನ್ನ ಪತ್ನಿಯ ಮೇಲೆ ಹಲ್ಲೆ ಮಾಡಿದ್ದಾನೆ. ನಂತರ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಆಕೆಯ ಕಿರುಚಾಟ ಕೇಳಿದ ನೆರೆಹೊರೆಯವರು ಬಂದು ರಕ್ಷಿಸಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯಕ್ಕೆ ಮಹಿಳೆ ಸ್ಥಿತಿ ಗಂಭೀರವಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಪತ್ನಿಗೆ ಬೆಂಕಿ ಹಚ್ಚಿ ಆರೋಪಿ ಗ್ರಾಮದಿಂದ ಪರಾರಿಯಾಗಿದ್ದಾನೆ. ಆತನಿಗಾಗಿ ಶೋಧಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Comments are closed.