ನವದೆಹಲಿ: ನಷ್ಟದಲ್ಲಿರುವ ಬ್ಯಾಂಕ್ಗಳ ವಿಲೀನಕ್ಕೆ ಸರ್ಕಾರ ಈ ಹಿಂದೆಯೇ ಆದೇಶ ಹೊರಡಿಸಿತ್ತು. ಇದೀಗ ವಿಲೀನ ಪ್ರಕ್ರಿಯೆಗೆ ಚಾಲನೆ ನೀಡಲು ಸರ್ಕಾರ ಮುಂದಾಗಿದ್ದು, ಲೋಕಸಭೆಯಲ್ಲಿ ವಿಲೀನ ಪ್ರಕ್ರಿಯೆಗೆ ಅನುಮತಿ ಸಿಕ್ಕಿದೆ. ಸರ್ಕಾರವು ವಿಲೀನಗೊಳ್ಳುತ್ತಿರುವ ಬ್ಯಾಂಕುಗಳೊಂದಿಗೆ ಸಂಪರ್ಕದಲ್ಲಿದ್ದು ಯಾವುದೇ ರೀತಿಯ ನಿಯಮಗಳನ್ನು ಹಾಕಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
10 ಸಾರ್ವಜನಿಕ ಬ್ಯಾಂಕ್ಗಳನ್ನು 4 ಬ್ಯಾಂಕ್ಗಳಾಗಿ ವಿಲೀನಗೊಳಿಸುವ ಪ್ರಕ್ರಿಯೆ ಇದೇ ಏಪ್ರಿಲ್ 1ರಿಂದ ಆರಂಭವಾಗುವುದು ಎಂದು ಬುಧವಾರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಹೇಳಿದ್ದಾರೆ.
ಲೋಕ ಸಭೆ ಬ್ಯಾಂಕುಗಳ ವಿಲೀನ ಪ್ರಕ್ರಿಯೆಗೆ ಅನುಮತಿಯನ್ನು ನೀಡಿದ್ದು, ಸರ್ಕಾರ ವಿಲೀನಗೊಳ್ಳುತ್ತಿರುವ ಬ್ಯಾಂಕುಗಳೊಂದಿಗೆ ಸಂಪರ್ಕದಲ್ಲಿದೆ. ಯಾವುದೇ ರೀತಿಯ ನಿಯಮಗಳನ್ನು ನಾವು ಬ್ಯಾಂಕ್ಗಳಿಗೆ ಹಾಕಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಹೇಳಿದ್ದಾರೆ.
ಬ್ಯಾಂಕುಗಳ ವಿಲೀನದ ಬಗ್ಗೆ ಈಗಾಗಲೇ ಆಯಾ ಬ್ಯಾಂಕುಗಳ ನಿರ್ದೇಶಕರು ನಿರ್ಧಾರವನ್ನು ತೆಗೆದುಕೊಂಡಾಗಿದೆ ಎಂದು ವರದಿಗಾರರಿಗೆ ಅವರು ತಿಳಿಸಿದರು. ಜಾಗತಿಕ ಬ್ಯಾಂಕುಗಳನ್ನು ಮಾಡುವ ಉದ್ದೇಶದಿಂದ ಈ ವಿಲೀನ ಪ್ರಕ್ರಿಯೆಗಳನ್ನು ಮಾಡಲಾಗುತ್ತಿದೆ ಎಂದರು.
ಬ್ಯಾಂಕಿಂಗ್ ವ್ಯವಸ್ಥೆಯ ಬಲವರ್ಧನೆ ಮಾಡುವ ಸಲುವಾಗಿ 2019 ಆಗಸ್ಟ್ ತಿಂಗಳಲ್ಲಿ ಸರ್ಕಾರ ಸಾರ್ವಜನಿಕ ವಲಯದ ನಾಲ್ಕು ಬ್ಯಾಂಕ್ಗಳನ್ನು ವಿಲೀನಗೊಳಿಸಲು ಆದೇಶಿಸಿತ್ತು. ಸಾರ್ವಜನಿಕ ವಲಯದಲ್ಲಿ 27 ಬ್ಯಾಂಕ್ಗಳನ್ನು 12 ಬ್ಯಾಂಕ್ಗಳಾಗಿ ವಿಲೀನಗೊಳಿಸಲಾಗಿತ್ತು. ಸರ್ಕಾರಿ ಸ್ವಾಮ್ಯದ ಸಾಲದಾತರನ್ನು ಜಾಗತಿಕ ಮಟ್ಟಕ್ಕೇರಿಸುವ ಗುರಿ ಇದಾಗಿದೆ ಎಂದು ಕೇಂದ್ರ ತಿಳಿಸಿತ್ತು.
ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಅನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ ಜೊತೆ ವಿಲೀನಗೊಳಿಸಲಾಗುವುದು. ಸಿಂಡಿಕೇಟ್ ಬ್ಯಾಂಕ್ ಅನ್ನು ಕೆನರಾ ಬ್ಯಾಂಕ್ ಜೊತೆ ವಿಲೀನಗೊಳಿಸಲಾಗುತ್ತದೆ. ಅಲಹಬಾದ್ ಬ್ಯಾಂಕ್ ಇಂಡಿಯನ್ ಬ್ಯಾಂಕ್ ಜೊತೆ ಮತ್ತು ಆಂಧ್ರ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್ ಅನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ವಿಲೀನಗೊಳಿಸಲಾಗುವುದು.
ಕಳೆದ ವರ್ಷ, ದೇನಾ ಬ್ಯಾಂಕ್ ಮತ್ತು ವಿಜಯಾ ಬ್ಯಾಂಕ್ ಅನ್ನು ಬ್ಯಾಂಕ್ ಆಫ್ ಬರೋಡ ಜೊತೆ ವಿಲೀನಗೊಳಿಸಲಾಗಿತ್ತು. ಇದಕ್ಕೂ ಮೊದಲು ಐದು ಎಸ್ಬಿಐನ ಅಡಿಯಲ್ಲಿದ್ದ ಬ್ಯಾಂಕುಗಳನ್ನು ಮತ್ತು ಮಹಿಳಾ ಬ್ಯಾಂಕ್ ಅನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ವಿಲೀನಗೊಳಿಸಲಾಗಿತ್ತು.
Comments are closed.