ರಾಷ್ಟ್ರೀಯ

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಜ್ಯೋತಿರಾದಿತ್ಯ ಸಿಂಧಿಯಾ

Pinterest LinkedIn Tumblr


ಭೋಪಾಲ್: ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಸಂಜೆ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ ಎಂದು ವರದಿಯಾಗಿದೆ.

ಇಂದು ಮುಂಜಾನೆ ಹೊಸದಿಲ್ಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಜ್ಯೋತಿರಾದಿತ್ಯ ಸಿಂಧಿಯಾ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದಾದ ಕೆಲವೇ ಘಂಟೆಗಳಲ್ಲಿ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಬಿಜೆಪಿ ಪಕ್ಷದ ಮೂಲಕ ರಾಜ್ಯಸಭೆಗೆ ಆಯ್ಕೆ ಮಾಡಲಾಗುವುದು ಎಂದು ವರದಿಯಾಗಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಮಂಗಳವಾರ ಸಂಜೆ ಸಭೆ ಸೇರಲಿದ್ದು, ರಾಜ್ಯಸಭೆಗೆ ಪಕ್ಷದ ಉಮೇದುವಾರರನ್ನು ಆಯ್ಕೆ ಮಾಡಲಿದೆ. ಇದಕ್ಕಿಂತ ಮೊದಲು ಸಿಂಧಿಯಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಇಂದು ಸಂಜೆ ಆರು ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ.

ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ತೊರೆದ ಬೆನ್ನಲ್ಲೇ ಮಧ್ಯಪ್ರದೇಶದ 20 ಜನ ಕಾಂಗ್ರೆಸ್ ಶಾಸಕರು ಪಕ್ಷಕ್ಕೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಈ ಮೂಲಕ ಕಳೆದ 15 ತಿಂಗಳ ಹಿಂದೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರಕಾರ ಅಲ್ಪಮತಕ್ಕೆ ಕುಸಿದಿದೆ.

Comments are closed.