ರಾಷ್ಟ್ರೀಯ

ಭಾರತದಲ್ಲಿ ಕಾಲಿಟ್ಟಿರುವ ಮಹಾಮಾರಿ ಕೊರೋನಾ ವೈರಸ್’ಗೆ ಮುಂಬೈ ವ್ಯಕ್ತಿ ಬಲಿ; ಸಾವಿನ ಸಂಖ್ಯೆ 5ಕ್ಕೆ ಏರಿಕೆ

Pinterest LinkedIn Tumblr

ನವದೆಹಲಿ: ಚೀನಾ ಬಳಿಕ ಭಾರತದಲ್ಲಿ ಕಾಲಿಟ್ಟಿರುವ ಮಹಾಮಾರಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ತನ್ನ ಪ್ರಭಾವವನ್ನು ಹೆಚ್ಚಿಸತೊಡಗಿದ್ದು, ವೈರಸ್’ಗೆ ಇದೀಗ ಮುಂಬೈನಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇದರಂತೆ ಹೆಮ್ಮಾರಿಗೆ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಮಹಾರಾಷ್ಟ್ರ ಮೂಲದ 56 ವರ್ಷದ ವ್ಯಕ್ತಿಯೊಬ್ಬರು ವೈರಸ್’ಗೆ ಬಲಿಯಾಗಿದ್ದಾರೆಂದು ತಿಳಿದುಬಂದಿದೆ. ಇದರಂತೆ ದೇಶದಲ್ಲಿ ಮಾರಕ ಕೊರೋನಾ ವೈರಸ್’ಗೆ ಐದು ಮಂದಿ ಬಲಿಯಾದಂತಾಗಿದೆ.

ವೈರಸ್ ನಿಂದಾಗಿ ವ್ಯಕ್ತಿ ಮಾರ್ಚ್.21 ರಂದು ಮುಂಬೈನ ಹೆಚ್ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ವ್ಯಕ್ತಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.

ಮಹಾರಾಷ್ಟ್ರದಲ್ಲಿ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಭಾನುವಾರ ಒಂದೇ ದಿನದಲ್ಲಿ ಒಟ್ಟು 10 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಈ ವರೆಗೂ 74 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Comments are closed.