ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 65 ರೂ.ಗಳಷ್ಟು ಕಡಿತ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ದೇಶದ ಎಲ್ಲಾ ಮಹಾನಗರಗಳಲ್ಲಿ ಇಂದಿನಿಂದಲೇ ಜಾರಿಗೆ ಬರುವಂತೆ ಪ್ರತಿ ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 65 ರೂ. ಕಡಿತ ಮಾಡಲಾಗಿದೆ.
ಲಾಕ್‌ಡೌನ್ ಸಮಯದಲ್ಲಿ ಸಾರ್ವಜನಿಕರ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ 14.2 ಲೀಟರ್ ಸಾಮರ್ಥ್ಯದ ಸಿಲಿಂಡರ್ ಬೆಲೆಯಲ್ಲಿ ಭಾರೀ ಕಡಿತ ಮಾಡಿರುವುದು ಸಂತಸದ ಸಂಗತಿಯಾಗಿದೆ.
ದೇಶದ ಮಹಾನಗರಗಳಲ್ಲಿ ಈ ಆದೇಶ ಇಂದಿನಿಂದಲೇ ಜಾರಿಗೆ ಬರಲಿದ್ದು, ಅದರಂತೆ ಮಹಾನಗರಗಳಲ್ಲಿ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಗಳತ್ತ ಗಮನ ಹರಿಸುವುದಾದರೆ..
ನವದೆಹಲಿ: 744 ರೂ. (61.5 ರೂ. ಕಡಿತ)
ಮುಂಬೈ: 714.50 (62 ರೂ. ಕಡಿತ)
ಕೋಲ್ಕತ್ತಾ: 774.50(65 ರೂ. ಕಡಿತ)
ಚೆನ್ನೈ: 761.50(64.5 ರೂ. ಕಡಿತ)
Comments are closed.