ನವದೆಹಲಿ(ಏ.04): ವಿಶ್ವದಾದ್ಯಂತ ಕೊರೋನಾ ವೈರಸ್ ಅಟ್ಟಹಾಸಕ್ಕೆ ಇಲ್ಲಿಯವರೆಗೂ 62,433 ಮಂದಿ ಬಲಿಯಾಗಿದ್ದಾರೆ. ಜಗತ್ತಿನ ಒಟ್ಟು 182 ದೇಶಗಳಲ್ಲಿ 1,161,550 ಹೆಚ್ಚು ಮಂದಿಗೆ ಸೋಂಕು ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಭಾರತದಂತೆಯೇ ಇಡೀ ವಿಶ್ವದ ಬಹುತೇಕ ದೇಶಗಳಲ್ಲಿ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಹಾಗಾಗಿ ಸುಮಾರು 260 ಕೋಟಿ ಜನ ಈಗ ಗೃಹ ಬಂಧನಕ್ಕೆ ಒಳಗಾಗಿದ್ದಾರೆ. ಬ್ರಿಟನ್, ಫ್ರಾನ್ಸ್, ಇಟಲಿ, ಸ್ಪೇನ್ ಸೇರಿದಂತೆ 42 ದೇಶಗಳು ಲಾಕ್ಡೌನ್ ಮಾಡಲಾಗಿದೆ. ಇದೀಗ ಈ ಸಾಲಿಗೆ ಭಾರತ ಮತ್ತು ನ್ಯೂಜಿಲೆಡ್ ಸೇರ್ಪಡೆಯಾಗಿವೆ. ಎಲ್ಲೆಡೆಯೂ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಭಾರತದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದೆ. ಇಂದು ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ಇಬ್ಬರು ವ್ಯಕ್ತಿಗಳು ಕೊರೋನಾಗೆ ಬಲಿಯಾದ ಪರಿಣಾಮ ಸಾವಿನ ಸಂಖ್ಯೆ 75ಕ್ಕೇರಿದೆ. ಇದುವರೆಗೂ 3,072 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 212 ಮಂದಿ ಸಂಪೂರ್ಣ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಈ ಮಧ್ಯೆಯೇ ಜಗತ್ತಿನಾದ್ಯಂತ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಮಾರಣಾಂತಿಕ ಕೊರೋನಾ ವೈರಸ್ ಅನ್ನು ನಿಯಂತ್ರಿಸುವ ಸಲುವಾಗಿ ಹಲವು ಕ್ರಮಗಳನ್ನು ಕೈಕೊಳ್ಳಲಾಗಿದೆ.
Comments are closed.