ರಾಷ್ಟ್ರೀಯ

ಲಾಕ್‌ಡೌನ್; ಮೇ 3ರ ವರೆಗೆ ಎಲ್ಲಾ ವಿಮಾನ ರದ್ದು !

Pinterest LinkedIn Tumblr

ನವದೆಹಲಿ: ದೇಶದಾದ್ಯಂತ ಲಾಕ್‌ಡೌನ್ ಅವಧಿ ಮುಂದುವರೆದಿರುವ ಕಾರಣ ಅಂತಾರಾಷ್ಟ್ರೀಯ ಮತ್ತು ದೇಶೀಯ ವಾಯು ವಿಮಾನ ಸಾರಿಗೆ ವ್ಯವಸ್ಥೆಯನ್ನು ಮೇ 03 ರ ಮಧ್ಯರಾತ್ರಿ 11.59 ರ ವರೆಗೆ ರದ್ದು ಮಾಡಲಾಗಿದೆ ಎಂದು ಭಾರತೀಯ ವಿಮಾನಯಾನ ಸಚಿವಾಲಯ ಸಂಸ್ಥೆ ತಿಳಿಸಿದೆ.

ಭಾರತದಲ್ಲಿ ಕೊರೋನಾ ಸಾಮೂದಾಯಿಕವಾಗಿ ಹರಡುವುದನ್ನು ತಡೆಯುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಲಾಕ್‌ಡೌನ್ ಘೋಷಿಸಿದ್ದರು. ಆದರೆ, ಲಾಕ್‌ಡೌನ್ ನಡುವೆಯೂ ಪರಿಸ್ಥಿತಿ ಬಿಗಡಾಯಿಸಿದ್ದು ಈ ಅವಧಿಯನ್ನು ಮತ್ತೆ 19 ದಿನಕ್ಕೆ ಏರಿಸಿರುವ ಮೋದಿ ಮೇ 03ರ ವರೆಗೆ ಲಾಕ್‌ಡೌನ್ ಅನ್ನು ಮುಂದುವರೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತೀಯ ವಿಮಾನಯಾನ ಸಚಿವಾಲಯ ಇಂದು ಮಹತ್ವದ ಆದೇಶ ಹೊರಡಿಸಿದೆ.

ಭಾರತದಲ್ಲಿ ಈಗಾಗಲೇ ಕಳೆದ ಒಂದು ತಿಂಗಳಿನಿಂದ ಎಲ್ಲಾ ವಿಮಾನ ನಿಲ್ದಾಣಗಳೂ ಸ್ಥಗಿತವಾಗಿವೆ. ಅಂತಾರಾಷ್ಟ್ರೀಯ ಹಾಗೂ ದೇಶೀಯ ವಿಮಾನ ಯಾನಕ್ಕೆ ಕೇಂದ್ರ ಸರ್ಕಾರ ತಡೆ ನೀಡಿರುವ ಹಿನ್ನೆಲೆಯಲ್ಲಿ ಎಲ್ಲಾ ವಿಮಾನಯಾನ ಸಂಸ್ಥೆಗಳೂ ನಷ್ಟದಲ್ಲಿದ್ದು ಅಪಾರ ಸಂಖ್ಯೆಯ ಉದ್ಯೋಗಿಗಳು ಇದೀಗ ಕೆಲಸ ಕಳೆದುಕೊಳ್ಳುವ ಭೀತಿಯನ್ನು ಎದುರಿಸುತ್ತಿದ್ದಾರೆ ಎನ್ನಲಾಗುತ್ತಿದೆ.

Comments are closed.