ರಾಷ್ಟ್ರೀಯ

ದೇಶದಲ್ಲಿ ದಾಖಲೆಯ 1,553 ಹೊಸ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆ

Pinterest LinkedIn Tumblr


ನವದೆಹಲಿ: ಮಾರಕ ಕೊರೋನಾ ವೈರಸ್ ಆರ್ಭಟ ಭಾರತದಲ್ಲಿ ಮುಂದುವರೆದಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ದಾಖಲೆಯ 1,553 ಹೊಸ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ದಾಖಲೆಯ ಹೆಚ್ಚಳ ಕಂಡಿದ್ದು. ಒಂದು ದಿನದಲ್ಲಿ 1553 ಪ್ರಕರಣಗಳು ವರದಿಯಾಗಿದ್ದು ಇದು ಈ ವರೆಗಿನ ಅತ್ಯಧಿಕ ಪ್ರಕರಣ ಎಂದು ಹೇಳಲಾಗಿದೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ17,265 ಏರಿಕೆಯಾಗಿದೆ. ಅಂತೆಯೇ ಕಳೆದೊಂದು ದಿನದಲ್ಲಿ ಒಟ್ಟಾರೆ ದೇಶಾದ್ಯಂತ 36 ಸಾವುಗಳು ಸಂಭವಿಸಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸಾವುಗಳು ಸಂಖ್ಯೆ 543 ಆಗಿವೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಅನ್ವಯ ಕೊರೋನಾ ಸೋಂಕಿತರ ಪೈಕಿ ಈ ವರೆಗೂ 2859 ಮಂದಿ ಗುಣಮುಖರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರವೊಂದರಲ್ಲೇ ಕಳೆದ 24 ಗಂಟೆಗಳಲ್ಲಿ 552 ಪ್ರಕರಣಗಳು ವರದಿಯಾಗಿದ್ದು, ಅಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಕೂಡ 4 ಸಾವಿರ ಗಡಿ ದಾಟಿದೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 4203ಕ್ಕೆ ಏರಿಕೆಯಾಗಿದ್ದು, ಈ ವರೆಗೂ 223 ಮಂದಿ ಸಾವನ್ನಪ್ಪಿದ್ದಾರೆ. ಅಂತೆಯೇ 507 ಮಂದಿ ಗುಣಮುಖರಾಗಿದ್ದಾರೆ. ರಾಜಧಾನಿ ದೆಹಲಿಯಲ್ಲೂ ಸೋಂಕಿತರ ಸಂಖ್ಯೆ 2 ಸಾವಿರ ಗಡಿ ದಾಟಿದ್ದು, 2,003ಕ್ಕೆ ಏರಿಕೆಯಾಗಿದೆ. 45 ಸೋಂಕಿತರು ಸಾವನ್ನಪ್ಪಿದ್ದು, 72 ಮಂದಿ ಚೇತರಿಕೆ ಕಂಡಿದ್ದಾರೆ. ಆರಂಭದಲ್ಲಿ ಸೋಂಕು ಪ್ರಕರಣಗಳಲ್ಲಿ ಎರಡನೇ ಸ್ಥಾನದಲ್ಲಿದ್ದ ಕೇರಳದಲ್ಲಿ ಈಗ, ಹೊಸ ಪ್ರಕರಣಗಳು ಕಡಿಮೆಯಾಗಿವೆ. ಅಲ್ಲಿ ಈ ವರೆಗೆ 401 ಪ್ರಕರಣಗಳು ವರದಿಯಾಗಿವೆ. ಹೀಗಾಗಿ ಇಂದಿನಿಂದ ಲಾಕ್‌ ಡೌನ್‌ ತೆರವು ಮಾಡಲಾಗಿದೆ.

ರಾಜಸ್ಥಾನದಲ್ಲಿ ಸೋಂಕಿತರ ಸಂಖ್ಯೆ 1,478 ಏರಿಕೆಯಾಗಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ. ಅಂತೆಯೇ 183 ಮಂದಿ ಗುಣಮುಖರಾಗಿದ್ದಾರೆ. ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 1,477ಕ್ಕೆ ಏರಿಕೆಯಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ 411 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು ಮಧ್ಯ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 1,407ಕ್ಕೆ ಏರಿಕೆಯಾಗಿದ್ದು, 70 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 127 ಮಂದಿ ಗುಣಮುಖರಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 1,084ಕ್ಕೆ ಏರಿಕೆಯಾಗಿದೆ.

Comments are closed.