ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ಮತ್ತೆ ಹೆಚ್ಚಾಗಿದ್ದು ಕಳೆದ 24 ಗಂಟೆಗಳಲ್ಲಿ 1,229 ಹೊಸ ಪ್ರಕರಣ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 21,700ಕ್ಕೆ ಏರಿಕೆಯಾಗಿದೆ. ಇನ್ನು ಇಂದು 34 ಮಂದಿ ಮೃತಪಟ್ಟಿದ್ದು ಸಾವಿನ ಸಖ್ಯೆ 686ಕ್ಕೆ ಏರಿಕೆಯಾಗಿದೆ.
21,700 ಪ್ರಕರಣಗಳ ಪೈಕಿ 16,689 ಮಂದಿ ಚಿಕಿತ್ಸೆ ಪಡೆಯುತ್ತಿದ್ದು 4,325 ಮಂದಿ ಗುಣಮುಖರಾಗಿದ್ದಾರೆ. ಇನ್ನು 686 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಮಾರ್ಚ್ 23ರವರೆಗೆ ದೇಶದಲ್ಲಿ 14,915 ಮಂದಿಗೆ ಪರೀಕ್ಷೆ ನಡೆಸಲಾಗಿತ್ತು. ಇದೀಗ ಕಳೆದ ಒಂದು ತಿಂಗಳಲಲ್ಲಿ 5 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಜಂಟಿ ಕಾರ್ಯದರ್ಶಿ ಲವ್ ಅಗರವಾಲ್ ತಿಳಿಸಿದ್ದಾರೆ.
ದೇಶದಲ್ಲಿ ಮಹಾರಾಷ್ಟ್ರ ಜಿಲ್ಲೆ ಕೊರೋನಾ ಹಾಸ್ ಸ್ಪಾಟ್ ಆಗಿದ್ದು ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಇದುವರೆಗೆ 5,652ಕ್ಕೆ ಏರಿದ್ದು, ಸಾವಿನ ಸಂಖ್ಯೆ 269ಕ್ಕೇರಿದೆ.
Comments are closed.