ಅಹಮದಾಬಾದ್: ಕೊರೋನಾ ವೈರಸ್ನಿಂದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಾವನ್ನಪ್ಪಿದ್ದಾರೆ. ಗುಜರಾತ್ನ ಕಾಂಗ್ರೆಸ್ ನಾಯಕ ಬದ್ರುದ್ದೀನ್ ಶೇಖ್ ಕೊರೋನಾ ವೈರಸ್ ನಿಂದಾಗಿ ಮೃತಪಟ್ಟಿದ್ದಾರೆ.
ದೇಶಾದ್ಯಂತ ಲಾಕ್ಡೌನ್ ಘೋಷಿಸಿರುವುದರಿಂದ ಅನೇಕ ಜನರು ತಿನ್ನಲು ಆಹಾರವೂ ಇಲ್ಲದೆ ಪರದಾಡುತ್ತಿದ್ದಾರೆ. ಅಂಥವರಿಗೆ ಆಹಾರ ವಿತರಿಸಲು ಹೋಗಿದ್ದ ಬದ್ರುದ್ದೀನ್ ಶೇಖ್ ಅವರಲ್ಲಿ ಕೊರೋನಾ ಲಕ್ಷಣಗಳು ಕಂಡುಬಂದಿತ್ತು.
ಈ ಹಿನ್ನೆಲೆಯಲ್ಲಿ ಗುಜರಾತ್ನ ಅಹಮದಾಬಾದ್ನಲ್ಲಿರುವ ಎಸ್ವಿಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.
ಬಡವರಿಗೆ ಆಹಾರ ವಿತರಿಸುವಾಗಲೇ ಯಾರಿಂದಲೋ ಬದ್ರುದ್ದೀನ್ ಶೇಖ್ಗೆ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಈ ಮೂಲಕ ದೇಶದಲ್ಲಿ ಕೊರೋನಾಗೆ ಬಲಿಯಾದ ಮೊದಲ ರಾಜಕಾರಣಿ ಬದ್ರುದ್ದೀನ್ ಶೇಖ್ ಆಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಶಕ್ತಿ ಸಿನ್ಹಾ ಗೋಹಿಲ್ ಖಚಿತಪಡಿಸಿದ್ದಾರೆ.
Comments are closed.