ನವದೆಹಲಿ: ದೇಶದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,396 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ 27,982ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
24 ಗಂಟೆಗಳಲ್ಲಿ ದೇಶಾದ್ಯಂತ ಒಟ್ಟು 48 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ ಹೀಗಾಗಿ ಕೊರೋನಾಗೆ ಬಲಿಯಾದವರ ಸಂಖ್ಯೆ 872 ಕ್ಕೇರಿದೆ ಎಂದು ಇಂದು ಬೆಳಗ್ಗೆ ಕೇಂದ್ರ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ತಿಳಿಸಿದೆ.
ಇನ್ನು, ದೆಹಲಿಯ ಆಸ್ಪತ್ರೆಗಳಲ್ಲೇ ಕೊರೋನಾ ಸೋಂಕಿನ ಅಬ್ಬರ ಜೋರಾಗಿದೆ. ನಿನ್ನೆ ಒಂದೇ ದಿನ ಆರೋಗ್ಯ ಸೇವೆಯ 51 ಜನರಲ್ಲಿ ಸೋಂಕು ಪತ್ತೆಯಾಗಿದೆ. ದೆಹಲಿಯ ರೋಹಿಣಿಯ ಅಂಬೇಡ್ಕರ್ ಆಸ್ಪತ್ರೆಯಲ್ಲಿ 32 ಜನ, ಜಗಜೀವನರಾಮ್ ಆಸ್ಪತ್ರೆಯಲ್ಲಿ 19 ನರ್ಸ್ಗಳು, ಎಮ್ಸ್ ಆಸ್ಪತ್ರೆಯ ನರ್ಸ್ ಮತ್ತು ಅವರ ಇಬ್ಬರು ಮಕ್ಕಳಲ್ಲಿ ಕೊರೋನಾ ಕಾಣಿಸಿಕೊಂಡಿದೆ. ಇನ್ನು, ಅಂಬೇಡ್ಕರ್ ಆಸ್ಪತ್ರೆಯಲ್ಲಿ ಕೊರೋನಾ ಪೀಡಿತ ಗರ್ಭಿಣಿ ಮೃತಪಟ್ಟಿದ್ದಾರೆ.
ಒಂದು ತಿಂಗಳ ಕಾಲ ದೇಶವನ್ನೇ ಲಾಕ್ಡೌನ್ ಮಾಡಿದ ಹೊರತಾಗಿಯೂ ಕೊರೋನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಇದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ.
Comments are closed.