ನವದೆಹಲಿ(ಏ.27): ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮಾರಕ ಕೊರೋನಾ ವೈರಸ್ಗೆ 60 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 886ಕ್ಕೇರಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೇಂದ್ರ ಸರ್ಕಾರದ ಪ್ರಕಾರ, ನಿನ್ನೆಯಿಂದ 24 ಗಂಟೆಗಳ ಅವಧಿಯಲ್ಲಿ 1,436 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಇದರ ಪರಿಣಾಮ ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 28,380ಕ್ಕೆ ಏರಿಕೆಯಾಗಿದೆ. ಈ ಪೈಕಿ 6,361 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ಸೋಂಕಿತರಲ್ಲಿ 111 ಮಂದಿ ವಿದೇಶಿಗರೂ ಕೂಡ ಇದ್ದಾರೆ ಎಂದು ತಿಳಿದು ಬಂದಿದೆ.
ಇನ್ನು, ಕಳೆದ 14 ದಿನಗಳಿಂದ ದೇಶದ 85 ಜಿಲ್ಲೆಗಳಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಕೇಸ್‌ಗಳು ದಾಖಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಸಂಬಂಧ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಮಾಧ್ಯಮದ ಜತೆ ವಿಷಯ ಹಂಚಿಕೊಂಡಿದ್ದಾರೆ. ದೇಶದ 85 ಜಿಲ್ಲೆಗಳಲ್ಲಿ ಕಳೆದ 14 ದಿನಗಳಿಂದ ಯಾವುದೇ ವ್ಯಕ್ತಿಗೆ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದಿದ್ದಾರೆ.
ದೇಶದ 16 ಜಿಲ್ಲೆಗಳಲ್ಲಿ 28 ದಿನಗಳಿಂದ ಒಂದು ಕೊರೋನಾ ಪಾಸಿಟಿವ್ ಕೇಸ್‌ಗಳು ದಾಖಲಾಗಿಲ್ಲ. ಈ ಪೈಕಿ ಕರ್ನಾಟಕ ದಾವಣಗೆರೆಯೂ ಇದೆ ಎಂಬುದು ಖುಷಿ ವಿಚಾರ. ಕಳೆದ 28 ದಿನಗಳಿಂದ ದಾವಣಗೆರೆಯಲ್ಲಿ ಯಾವುದೇ ಕೊರೋನಾ ಪ್ರಕರಣಗಳು ದಾಖಲಾಗಿಲ್ಲ.
ಇನ್ನು, ಕರ್ನಾಟಕದಲ್ಲಿ ಇಂದು 9 ಮಂದಿಗೆ ಕೊರೋನಾ ಪತ್ತೆಯಾಗಿದ್ದು, ಒಟ್ಟು 512 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ.
Comments are closed.