ನವದೆಹಲಿ(ಏ.29): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಘೋಷಣೆ ಮಾಡುವ ಮುನ್ನವೇ ಮೇ 3ರ ನಂತರ ಮತ್ತೆ ಎರಡು ವಾರಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಪ್ರಕಟಿಸಿದ್ಧಾರೆ. ಮೇ 3ರ ನಂತರ 2 ವಾರಗಳವರೆಗೆ ಲಾಕ್ ಡೌನ್ ಮುಂದುವರಿಯಲಿದೆ ಎಂದಿರುವ ಅಮರೀಂದರ್ ಸಿಂಗ್, ಕೆಲವು ನಿಷೇಧಾಜ್ಞೆ ನಿಯಮಗಳನ್ನು ಜಾರಿಗೊಳಿಸಿದ್ದಾರೆ.
ಇನ್ನು, ಬೆಳಿಗ್ಗೆ 7ರಿಂದ 11 ಗಂಟೆಯವರೆಗೆ ಮಾತ್ರ ನಿಷೇಧಾಜ್ಞೆ ಸಡಿಲಿಕೆ ಮಾಡಿರುವ ಪಂಜಾಬ್ ಸಿಎಂ ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ ಮಾಡಿಕೊಡಲಿದ್ದಾರೆ. ಅಗತ್ಯ ವಸ್ತಗಳನ್ನು ಜನರು ಖರೀದಿ ಮಾಡೋಕೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೊರೋನಾ ನಿಯಂತ್ರಣಕ್ಕೆ ಈ ಕ್ರಮ ಅನಿವಾರ್ಯ ಎಂದಿದ್ದಾರೆ.
ಇತ್ತೀಚೆಗೆ ಕೊರೋನಾ ವಿರುದ್ಧ ಹೋರಾಡಲು ಎರಡನೇ ಅವಧಿಗೆ ಮೇ 3ನೇ ತಾರೀಕಿನವರೆಗೂ ಜಾರಿ ಮಾಡಲಾಗಿದ್ದ 21 ದಿನಗಳ ಲಾಕ್ಡೌನ್ ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಈ ವಿಡಿಯೋ ಸಂವಾದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ತೆಲಂಗಾಣ ಸಿಎಂ ಕೆಸಿಆರ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಧಾನಿ ನರೇಂದ್ರ ಮೋದಿಯವರು ಈ ಸಂವಾದದ ವೇಳೆ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ವಿಚಾರಗಳನ್ನು ಚರ್ಚಿಸಿದು. ಜತೆಗೆ ಕೊರೋನಾ ವಿರುದ್ಧದ ಹೋರಾಟ ಮಾಡಲು ನಾವು ಮೇ 15ನೇ ತಾರೀಕಿನವರೆಗೂ ಲಾಕ್ಡೌನ್ ಮುಂದುವರಿಸಲೇಬೇಕು ಎಂದು ಸೂಚನೆ ನೀಡಿದರು.
Comments are closed.