ನವದೆಹಲಿ: ಸಿಬಿಎಸ್ಇಯ 10 ಮತ್ತು 12ನೇ ತರಗತಿ ಪರೀಕ್ಷೆಗಳು ಕೊರೋನಾ ವೈರಸ್ನಿಂದಾಗಿ ಮುಂದೂಡಿಕೆಯಾಗಿದ್ದು, ಜುಲೈ ಮೊದಲಾರ್ಧದ ಅವಧಿಯಲ್ಲಿ ಈ ತರಗತಿಗಳ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಪರೀಕ್ಷೆಗಳು ಯಾವಾಗ ನಡೆಯಲಿವೆ ಎಂದು ವಿದ್ಯಾರ್ಥಿಗಳು ತಾಳ್ಮೆಯಿಂದ ಕಾಯುತ್ತಿದ್ದಾರೆ. ಜುಲೈ 1ರಿಂದ 15ರವರೆಗೆ ಸಿಬಿಎಸ್ಇಯ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ನಡೆಸಲು ಇಂದು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಪರೀಕ್ಷೆಯ ವೇಳಾಪಟ್ಟಿಯನ್ನು ಸವಿವರವಾಗಿ ಸಿಬಿಎಸ್ಸಿ ನಂತರದಲ್ಲಿ ಪ್ರಕಟಿಸಲಿದೆ ಎಂದು ಸಚಿವರು ಮಾಹಿತಿ ನೀಡಿದರು.
ದೇಶದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡಲು ಆರಂಭವಾದ ಕಾರಣದಿಂದ ಮಾರ್ಚ್ 16ರಿಂದಲೇ ದೇಶದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಯಿತು. ಇದರಿಂದಾಗಿ ನಡೆಯಬೇಕಿದ್ದ ಪರೀಕ್ಷೆಗಳು ಸಹ ಮುಂದೂಡಿಕೆಯಾದವು. ಅದಾದ ಬಳಿಕ ಮಾರ್ಚ್ 24ರಿಂದ ದೇಶವ್ಯಾಪಿ ಲಾಕ್ಡೌನ್ ಘೋಷಣೆ ಮಾಡಲಾಗಿದ್ದು, ಇದೇ ತಿಂಗಳ 17ರವರೆಗೆ ಲಾಕ್ಡೌನ್ ಮುಂದುವರೆಯಲಿದೆ.
Comments are closed.