ನವದೆಹಲಿ: ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಹೊರ ರಾಜ್ಯ ಕನ್ನಡಿಗರಿಗಾಗಿ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.
ಸೇವಾ ಸಿಂಧು ಅಡಿಯಲ್ಲಿ 956 ಮಂದಿ ನೋಂದಣಿ ಮಾಡಿಸಿಕೊಂಡಿದ್ದು, ಈ ಪೈಕಿ 800 ಮಂದಿ ಪ್ರಯಾಣಕ್ಕೆ ಜಿಲ್ಲಾಡಳಿತಗಳಿಂದ ಒಪ್ಪಿಗೆ ಸಿಕ್ಕಿದೆ. ಪ್ರಯಾಣಕ್ಕೆ ಶೀಘ್ರದಲ್ಲಿ ದಿನಾಂಕ ನಿಗದಿ ಮಾಡಲಾಗುತ್ತದೆ. ಪ್ರಯಾಣಕ್ಕೂ ಮುನ್ನ ದೆಹಲಿ ಆರೋಗ್ಯ ಇಲಾಖೆಯಿಂದ ಪ್ರಯಾಣಿಕರ ತಪಾಸಣೆ ನಡೆಸಲಾಗುತ್ತದೆ. ತಪಾಸಣೆ ಬಳಿಕ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಪ್ರಯಾಣಿಕರು ಬೆಂಗಳೂರು ತಲುಪಿದ ಬಳಿಕ ಮತ್ತೊಮ್ಮೆ ಅವರನ್ನು ಮತ್ತೊಮ್ಮೆ ಪರೀಕ್ಷೆ ಮಾಡಲಾಉಗುತ್ತದೆ. ಬಳಿಕ ಜಿಲ್ಲಾಡಳಿತ ಸೂಚಿಸಿದ ಪ್ರದೇಶದಲ್ಲಿ ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುತ್ತದೆ.
ಸೇವಾ ಸಿಂಧು ಅಡಿ ನೋಂದಣಿ ಮಾಡಿಕೊಳ್ಳದವರಿಗೆ ಪ್ರತ್ಯೇಕ ರೈಲು ವ್ಯವಸ್ಥೆ ಕೂಡ ಮಾಡಲಾಗಿದೆ. ಅವರಿಗೆ ಮೇ 14 ರಂದು ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಐಆರ್ ಟಿಸಿ ಮೂಲಕ ಟಿಕೆಟ್ ಬುಕ್ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ದೆಹಲಿ ಕರ್ನಾಟಕ ಭವನದಿಂದ ಮಾಹಿತಿ ನೀಡಿದೆ.
Comments are closed.