ರಾಷ್ಟ್ರೀಯ

ದೇಶದಲ್ಲಿ 24 ಗಂಟೆಗಳಲ್ಲಿ 3604 ಮಂದಿಗೆ ಕೊರೋನಾ ವೈರಸ್​; 70 ಸಾವಿರ ದಾಟಿದ ಸೋಂಕಿತರ ಸಂಖ್ಯೆ

Pinterest LinkedIn Tumblr


ನವದೆಹಲಿ(ಮೇ.12): ದೇಶಾದ್ಯಂತ ಕೊರೋನಾ ವೈರಸ್​​ ವ್ಯಾಪಕವಾಗಿ ಹರಡುತ್ತಿದೆ. ಈ ಮಾರಕ ಕೊರೋನಾ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 3,604 ಮಂದಿಗೆ ಬಂದು ವಕ್ಕರಿಸಿದೆ. ಇದರ ಪರಿಣಾಮ ದೇಶದಲ್ಲಿ ಸೋಂಕಿತರ ಸಂಖ್ಯೆ 70,756ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್​​​ ಬುಲೆಟಿನ್​​ನಲ್ಲಿ ತಿಳಿಸಲಾಗಿದೆ.

ಇನ್ನು, ಕೇಂದ್ರದ ಪ್ರಕಾರ ಇದುವರೆಗೂ 70,756 ಸೋಂಕಿತರ ಪೈಕಿ ಕೇವಲ 22454 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಮೂಲಕ ಪ್ರಸ್ತುತ ದೇಶದಲ್ಲಿ 46008 ಸಕ್ರಿಯ ಪ್ರಕರಣಗಳಿವೆ. ಎಲ್ಲರಿಗೂ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾರಕ ಕೊರೋನಾಗೆ ಇಲ್ಲಿಯತನಕ 2293 ಮಂದಿ ಬಲಿಯಾಗಿದ್ದಾರೆ. ಇದರಿಂದಾಗಿ ದೇಶದ ಜನರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗತೊಡಗಿದೆ. ಈ ಮಧ್ಯೆ ಕೊರೋನಾ ಇನ್ನೂ ಸಮುದಾಯ ಹಂತ ತಲುಪಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.

ದೇಶದಲ್ಲೀಗ ಮಾರಾಕ ಕೊರೋನಾ ವೈರಸ್​ ಮತ್ತಷ್ಟು ವ್ಯಾಪಕವಾಗಿ ಹರಡುತ್ತಿದೆ. ಇದರ ಪರಿಣಾಮ ಮಹಾರಾಷ್ಟ್ರ ಬೆನ್ನಲ್ಲೀಗ ತಮಿಳುನಾಡು ಭಾರತದ ಕೊರೋನಾ ಹಾಟ್‌ಸ್ಪಾಟ್‌ ಕೇಂದ್ರವಾಗಿ ಬದಲಾಗುತ್ತಿದೆ. ಆರಂಭದಲ್ಲಿ ತಹಬದಿಗೆ ಬಂದಿದ್ದ ಕೋವಿಡ್​​-19 ಈಗ ನಿಯಂತ್ರಣ ತಪ್ಪಿದ ಕಾರಣ ಸೋಂಕಿತರ ಸಂಖ್ಯೆ 8 ಸಾವಿರಕ್ಕೇರಿದೆ ಎಂದು ತಿಳಿದು ಬಂದಿದೆ.

ಅತ್ತ ವಿಶ್ವದ ದೊಡ್ಡಣ್ಣ ಅಮೆರಿಕವನ್ನು ಕೊರೋನಾ ವೈರಸ್‌ ಬಿಟ್ಟೂ ಬಿಡದೆ ಕಾಡುತ್ತಿದ್ದು, ಒಟ್ಟಾರೆ ಸಾವಿನ ಸಂಖ್ಯೆ 80,352ಕ್ಕೆ ಏರಿಕೆಯಾಗಿದೆ. ಇನ್ನೂ ಸೋಂಕು ಪೀಡಿತರ ಸಂಖ್ಯೆ 13,46,723ಕ್ಕೆ ಏರಿಕೆಯಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ. ಚೀನಾ, ಅಮೆರಿಕಾ ಬೆನ್ನಲ್ಲೀಗ ಭಾರತದ ಸರದಿ, ಮುಂದೆ ದೇಶದಲ್ಲಿ ಮತ್ತಷ್ಟು ಪ್ರಕರಣಗಳು ಹೆಚ್ಚಾಗಲಿವೆ ಎನ್ನಲಾಗುತ್ತಿದೆ.

Comments are closed.