ಫಿರೋಜಾಬಾದ್ (ಉತ್ತರಪ್ರದೇಶ): ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ದಂಪತಿ ಉಸಿರುಗಟ್ಟಿ ಜೀವಬಿಟ್ಟಿದ್ದಾರೆ. ಅವರ ಬೆಡ್‌ರೂಂನಲ್ಲಿ ಅಳವಡಿಸಿದ್ದ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ, ದಂಪತಿ ಉಸಿರುಗಟ್ಟಿ ಜೀವಬಿಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಶುಕ್ರವಾರ ಬೆಳಗ್ಗೆ 7 ಗಂಟೆಗೆ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು 48 ವರ್ಷದ ಅಜಯ್ ಮಿಶ್ರಾ ಹಾಗೂ ಅವರ ಪತ್ನಿ 45 ವರ್ಷದ ನಿಶಾ ಮಿಶ್ರಾ ಎದು ಗುರ್ತಿಸಲಾಗಿದೆ. ಇವರು ಫಿರೋಜಾಬಾದ್‌ನ ಮೊಹಲ್ಲಾ ಭಗವಾನ್ ಆಶ್ರಮ ಪ್ರದೇಶದ ನಿವಾಸಿಗಳೆಂದು ತಿಳಿದುಬಂದಿದೆ.
ಶುಕ್ರವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಅಗ್ನಿ ಶಾಮಕ ದಳದ ಸಿಬ್ಬಂದಿ ಜೊತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಕೂಡಲೇ ಕಾರ್ಯಾಚರಣೆ ಆರಂಭಿಸಿದರು. ಮನೆಯ ಕಿಟಕಿಗೆ ಅಳವಡಿಸಿದ್ದ ಕಬ್ಬಿಣದ ಗ್ರಿಲ್ ಕತ್ತರಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ, ಮನೆಯ ಒಳಗೆ ಪ್ರವೇಶಿಸಿ ಮೃತರ ಪಾರ್ಥಿವ ಶರೀರವನ್ನು ಹೊರತೆಗೆದರು.
ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ದಂಪತಿ ಉಸಿರುಗಟ್ಟಿ ಸತ್ತಿದ್ದಾರೆ ಅನ್ನೋದು ಮೇಲ್ನೋಟಕ್ಕೆ ತಿಳಿದುಬರ್ತಿದೆ ಎಂದು ಮನೆಯ ಒಳಗೆ ಪ್ರವೇಶಿಸಿ ಪರಿಶೀಲಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ. ಮೃತರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕಷ್ಟೇ ಸಮಗ್ರ ಮಾಹಿತಿ ಹೊರಬೀಳಲಿದೆ ಎಂದು ಅವರು ತಿಳಿಸಿದ್ದಾರೆ.
Comments are closed.