ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಭಾರತದಲ್ಲಿ ತನ್ನ ಉಗ್ರ ಪ್ರತಾಪವನ್ನು ಮುಂದುವರೆಸಿದ್ದು, ದೇಶದಲ್ಲಿ 24 ಗಂಟೆಗಳಲ್ಲಿ 3904 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 85,000 ಗಡಿಯತ್ತ ಸಾಗಿದೆ. ಈ ಮೂಲಕ ವಿಶ್ವದಲ್ಲಿಯೇ ಮೊದಲ ಬಾರಿಗೆ ಕೊರೋನಾ ವೈರಸ್ ಕಾಣಿಸಿಕೊಂಡ ಚೀನಾವನ್ನು ಭಾರತ ಹಿಂದಿಕ್ಕಿದೆ.
ಇದರ ಜೊತೆಗೆ ಅತೀ ಹೆಚ್ಚು ಸೋಂಕಿತರು ಇರುವ ವಿಶ್ವದ ದೇಶಗಳ ಪೈಕಿ 11ನೇ ಸ್ಥಾನಕ್ಕೂ ಏರಿದೆ. ಪ್ರಸ್ತುತ 1.16ಲಕ್ಷ ಸೋಂಕಿತರೊಂದಿಗೆ ಇರಾನ್ 10ನೇ ಸ್ಥಾನದಲ್ಲಿದೆ. ಇದೇ ಪ್ರಮಾಣದಲ್ಲಿ ಸೋಂಕಿತರು ಪ್ರತಿನಿತ್ಯ ಪತ್ತೆಯಾಗುತ್ತಾ ಹೋದರೆ, ಇರಾನ್ ದೇಶವನ್ನೂ ಭಾರತ ಹಿಂದಿಕ್ಕುವ ದಿನಗಳು ತೀರಾ ದೂರವೇನೂ ಇಲ್ಲ.
2019ರ ನ.17ರಂದು ಚೀನಾದಲ್ಲಿ ಮೊದಲ ಕೊರೋನಾ ಕೇಸು ಪತ್ತೆಯಾಗಿತ್ತು. ಈ ನಡುವೆ ಮೃತರ ಸಂಖ್ಯೆಯಲ್ಲಿ ಭಾರತದ ಚೀನಾ ಮಟ್ಟಕ್ಕೆ ತಲುಪಿಲ್ಲ ಎಂಬುದು ತುಸು ಸಮಾಧಾನಕರ ವಿಚಾರವಾಗಿದೆ. ಈ ಹಂತದಲ್ಲಿ ಚೀನಾದಲ್ಲಿ ಸಾವಿನ ಸಂಖ್ಯೆ ಶೇ. 5.5ರಷ್ಟಿತ್ತು. ಆದರೆ, ಭಾರತದಲ್ಲಿ ಶೇ.3.2ರಷ್ಟಿದೆ.
Comments are closed.