ನವದೆಹಲಿ: ಭಾರತದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಅಮೆರಿಕದ ಸ್ನೇಹದಿಂದ ಹೆಚ್ಚಿನ ಬಲ ಬಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಭಾರತದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಅಮೆರಿಕ ಸಾಥ್ ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವೆಂಟಿಲೇಟರ್ ಗಳನ್ನು ರವಾನೆ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದು, ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಧನ್ಯವಾದಗಳು, ಡೊನಾಲ್ಡ್ ಟ್ರಂಪ್ ಈ ಸಾಂಕ್ರಾಮಿಕದ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡುತ್ತಿದ್ದೇವೆ. ಇಂತಹ ಸಾಂಕ್ರಾಮಿಕ ಸಮಯದಲ್ಲಿ, ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡುವುದು ಮತ್ತು ನಮ್ಮ ಜಗತ್ತನ್ನು ಆರೋಗ್ಯಕರವಾಗಿ ಮತ್ತು COVID-19 ನಿಂದ ಮುಕ್ತವಾಗಿಸಲು ಸಾಧ್ಯವಾದಷ್ಟು ಒಗ್ಗೂಡಿ ಕಾರ್ಯನಿರ್ವಹಿಸುವುದು ಯಾವಾಗಲೂ ಮುಖ್ಯವಾಗಿದೆ ಎಂದು ಹೇಳಿದ್ದಾರೆ. ಅಂತೆಯೇ ಅಮೆರಿಕ ನಡೆ ಭಾರತ-ಅಮೇರಿಕಾ ಸ್ನೇಹಕ್ಕೆ ಹೆಚ್ಚಿನ ‘ಶಕ್ತಿ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
Comments are closed.