ನವದೆಹಲಿ: ಹಂತ ಹಂತವಾಗಿ ಲಾಕ್’ಡೌನ್ ತೆರವಾಗುತ್ತಲೇ, ದೇಶದಲ್ಲಿ ಹೊಸ ಕೊರೋನಾ ಸೋಂಕಿತರ ಸಂಖ್ಯೆಯೂ ಆತಂಕಕಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದೆ, ಕಳೆದ 24 ಗಂಟೆಗಳಲ್ಲಿ ದಾಖಲೆಯ 6088 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದು ಈ ವರೆಗಿನ ದೈನಂದಿನ ಗರಿಷ್ಠ ಪ್ರಮಾಣವಾಗಿದೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,18,447ಕ್ಕೆ ತಲುಪಿದೆ. ಇನ್ನು ಈ ವರೆಗೆ ದೇಶದಲ್ಲಿ 45,299 ಮಂದಿ ಗುಣಮುಖರಾಗಿದ್ದು, ಇನ್ನೂ 63,624 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಇದಲ್ಲದೆ ನಿನ್ನೆ ಒಂದೇ ದಿನ ಮಹಾಮಾರಿಗೆ 148 ಮಂದಿ ಬಲಿಯಾಗಿದ್ದು, ಮೃತಪಟ್ಟವರ ಸಂಖ್ಯೆ 3,583ಕ್ಕೆ ಏರಿಕೆಯಾಗಿದೆ.
ಈ ನಡುವ ಸತತ 5ನೇ ದಿನವೂ ಮಹಾರಾಷ್ಟ್ರದಲ್ಲಿ 2000ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 41,000 ಗಡಿ ದಾಟಿದೆ. ಅಲ್ಲದೆ, ಮುಂಬೈ ನಗರವೊಂದರಲ್ಲಿಯೇ ಬರೋಬ್ಬರಿ 25,000 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
ಮಹಾರಾಷ್ಟ್ರದಲ್ಲಿ ಹೆಮ್ಮಾರಿ ವೈರಸ್ ಆರ್ಭಟಕ್ಕೆ ಕಳೆದ 24 ಗಂಟೆಗಳಲ್ಲಿ 2000ಕ್ಕಿಂತಲೂ ಹೆಚ್ಚು ಮಂದಿಯಲ್ಲಿ ಸೋಂಕು ಸೋಂಕು ಪತ್ತೆಯಾಗಿದ್ದು, 41ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.
Comments are closed.