ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 6387 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 6387 ಹೊಸ ಕೊರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,51,767ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಸೋಂಕಿನಿಂದಾಗಿ 170 ಜನ ಮೃತಪಟ್ಟಿದ್ದು, ಕೊರೋನಾ ವೈರಸ್ ಸಾವಿನ ಸಂಖ್ಯೆ 4,337ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬೆಳಿಗ್ಗೆ ತಿಳಿಸಿದೆ.
ಇನ್ನು ದೇಶಾದ್ಯಂತ ಪ್ರಸ್ತುತ 83,004 ಸಕ್ರಿಯ ಪ್ರಕರಣಗಳಿದ್ದು, 64,425 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
Comments are closed.