ಚೆನ್ನೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಸೋಂಕಿಗೆ ತಮಿಳುನಾಡು ಸರ್ಕಾರ ತತ್ತರಿಸಿ ಹೋಗಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ದಾಖಲೆಯ 1685 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಮಾರಕ ಕೊರೋನಾ ವೈರಸ್ ದಾಳಿಗೆ ತಮಿಳುನಾಡು ತತ್ತರಿಸಿ ಹೋಗಿದ್ದು ಸತತ 10ನೇ ದಿನವೂ ತಮಿಳುನಾಡಿನಲ್ಲಿ 1 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ದೃಢವಾಗಿವೆ. ಕಳೆದ 24 ಗಂಟೆಗಳಲ್ಲಿ ತಮಿಳುನಾಡಿನಲ್ಲಿ 1685 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಚೆನ್ನೈ ಮಹಾನಗರಿಯೊಂದರಲ್ಲೇ 1242 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ತಮಿಳುನಾಡಿನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 34914ಕ್ಕೆ ಏರಿಕೆಯಾಗಿದೆ.
ಇನ್ನು ತಮಿಳುನಾಡಿನಲ್ಲಿ ಒಟ್ಟು 21 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೆ ತಮಿಳುನಾಡಿನಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 307ಕ್ಕೆ ಏರಿಕೆಯಾಗಿದೆ. ತಮಿಳುನಾಡು ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ತಮಿಳುನಾಡಿನಲ್ಲಿ ಇಂದು 13,219 ಮಂದಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿದ್ದು, ಆ ಮೂಲಕ ತಮಿಳುನಾಡಿನಲ್ಲಿ ಒಟ್ಟು 6.2 ಕೊರೋನಾ ಟೆಸ್ಟ್ ನಡೆಸಲಾಗಿದೆ.
ತಮಿಳುನಾಡಿನಲ್ಲಿ ಇಂದು 798 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ. ಆ ಮೂಲಕ ಈ ವರೆಗೂ18,635 ಮಂದಿ ಸೋಂಕಿತರು ಗುಣಮುಖರಾಗಿದ್ದು, 16,279 ಸಕ್ರಿಯ ಪ್ರಕರಣಗಳಿವೆ.
Comments are closed.