ರಾಷ್ಟ್ರೀಯ

ವಿಶ್ವ ಕೊರೊನಾ ಸೋಂಕಿತರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ!

Pinterest LinkedIn Tumblr


ಚೀನಾದ ವುಹಾನ್ ನಲ್ಲಿ ಮೊದಲು ಪತ್ತೆಯಾಗಿದ್ದ ಕೊರೊನಾ ವೈರಸ್ ವಿಶ್ವಾದ್ಯಂತ 4ಲಕ್ಷದ 18 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ ಪಾಸಿಟಿವ್ ಪ್ರಕರಣ 2ಲಕ್ಷದ 87ಸಾವಿರ ದಾಟಿದೆ.

ಜೂನ್ 12ರ ಕ್ಷಣಕ್ಷಣದ ಮಾಹಿತಿ ಇಲ್ಲಿದೆ:-

-ಕರ್ನಾಟಕದಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. 72ಮಂದಿಯ ಸಾವಾಗಿದ್ದು, 2,976ಮಂದಿ ಗುಣಮುಖರಾಗಿದ್ದಾರೆ. ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯ 10ನೇ ಸ್ಥಾನದಲ್ಲಿದೆ.

-ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಸೋಂಕಿತರ ಸಂಖ್ಯೆ 2,98,283ಕ್ಕೆ ಏರಿಕೆಯಾಗಿದೆ. 1,46,972 ಮಂದಿ ಗುಣಮುಖರಾಗಿದ್ದು, 8,501 ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿತ ಪ್ರಕರಣದ ದೇಶಗಳ ಪಟ್ಟಿಯಲ್ಲಿ ಭಾರತ 4ನೇ ಸ್ಥಾನಕ್ಕೆ ಏರಿದೆ. ಗುರುವಾರ ಒಂದೇ ದಿನ 11,128ಸೋಂಕಿತ ಪ್ರಕರಣ ಬೆಳಕಿಗೆ ಬಂದಿದೆ.

-ವಿಶ್ವದಾದ್ಯಂತ ಕೊರೊನಾ ವೈರಸ್ 4 ಲಕ್ಷದ 23ಸಾವಿರಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. 75 ಲಕ್ಷದ 95 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಇದರಲ್ಲಿ 38ಲಕ್ಷದ 41ಸಾವಿರಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ.

-ಅಮೆರಿಕದಲ್ಲಿ ಅತೀ ಹೆಚ್ಚು ಮಂದಿ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದು. ಸೋಂಕಿತ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿದೆ. ಇಲ್ಲಿ 20 ಲಕ್ಷದ 89ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿತರಿದ್ದು, 1 ಲಕ್ಷದ 16ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಪಟ್ಟಿಯಲ್ಲಿ ಕೂಡ ಮೊದಲನೇ ಸ್ಠಾನದಲ್ಲಿದೆ.

-ಬ್ರೆಜಿಲ್ ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರಿದ್ದು, ಇಲ್ಲಿ 8ಲಕ್ಷದ 05 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣ ಬೆಳಕಿಗೆ ಬಂದಿದೆ. 41,000 ಕ್ಕೂ ಹೆಚ್ಚು ಮಂದಿ ಇಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಚಾರ್ಟ್ ನಲ್ಲಿ 4ನೇ ಸ್ಥಾನದಲ್ಲಿದೆ.

-ರಷ್ಯ ಸೋಂಕಿತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. 5 ಲಕ್ಷದ 02 ಸಾವಿರ ಮಂದಿ ಇಲ್ಲಿ ಸೋಂಕಿತರಿದ್ದಾರೆ. 6,500ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

– ಯುಕೆ ಸೋಂಕಿತರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಇಳಿದಿದೆ. ಇಲ್ಲಿ 2ಲಕ್ಷದ 91ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 41,200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ. ಮೃತಪಟ್ಟವರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

-ಸೋಂಕಿತ ಪ್ರಕರಣಗಳಲ್ಲಿ 6ನೇ ಸ್ಥಾನದಲ್ಲಿರುವ ಸ್ಪೇನ್ ನಲ್ಲಿ 2ಲಕ್ಷದ 89ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. 27,100ಕ್ಕೂ ಹೆಚ್ಚು ಮಂದಿ ಕೊರೊನಾಗೆ ಇಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಚಾರ್ಟ್ ನಲ್ಲಿ 6ನೇ ಸ್ಥಾನದಲ್ಲಿದೆ.

-ಸೋಂಕಿತರ ಪಟ್ಟಿಯಲ್ಲಿ ಇಟಲಿ 7ನೇ ಸ್ಥಾನಕ್ಕೆ ಇಳಿದಿದೆ, ಮೃತಪಟ್ಟವರ ಚಾರ್ಟ್ ನಲ್ಲಿ 3ನೇ ಸ್ಥಾನದಲ್ಲಿದೆ. ಇಲ್ಲಿ 2ಲಕ್ಷದ 36ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 34,100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ.

Comments are closed.